ಮೈಸೂರು:ಜಿಲ್ಲಾ ಉಸ್ತುವಾರಿ ಮತ್ತು ವಸತಿ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ರಾಜಮಾತೆ ಪ್ರಮೋದದೇವಿ ಒಡೆಯರ್ ಅವರನ್ನು ಸೌಹಾರ್ದಯುತವಾಗಿ ಇಂದು ಭೇಟಿ ಮಾಡಿದರು.
ಪ್ರಮೋದಾದೇವಿ ಒಡೆಯರ್ ಭೇಟಿ ಮಾಡಿದ ಸಚಿವ ವಿ.ಸೋಮಣ್ಣ, ಸಂಸದ ಪ್ರತಾಪ್ ಸಿಂಹ - October 8th Dussehra
ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಹಾಗೂ ಸಂಸದ ಪ್ರತಾಪ್ ಸಿಂಹ ಅವರು ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿ ಮಾಡಿ ದಸರಾ ಮಹೋತ್ಸವಕ್ಕೆ ಸಹಕಾರ ನೀಡುವಂತೆ ಕೋರಿದ್ದಾರೆ.
Minister Somanna requests Pramodhadevi to support dussehra festival
ಅರಮನೆಗೆ ಭೇಟಿ ನೀಡಿದ ಸಚಿವ ಹಾಗೂ ಸಂಸದರು ಪ್ರಮೋದಾದೇವಿ ಒಡೆಯರ್ ಅವರೊಂದಿಗೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದರು.
ಮಾತುಕತೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ವಿ.ಸೋಮಣ್ಣ, ದಸರಾ ಮಹೋತ್ಸವಕ್ಕೆ ಸಹಕಾರ ನೀಡುವಂತೆ ಪ್ರಮೋದಾದೇವಿ ಒಡೆಯರ್ ಅವರಲ್ಲಿ ಮನವಿ ಮಾಡಿಕೊಂಡಿದ್ದೇವೆ. ಕುಟುಂಬದ ವ್ಯಾಜ್ಯದ ಬಗ್ಗೆ ಯಾವುದೇ ಚರ್ಚೆ ಮಾಡಿಲ್ಲ. ಮುಂದಿನ ದಿನಗಳಲ್ಲಿ ಅಧಿಕೃತವಾಗಿ ದಸರಾಗೆ ಆಹ್ವಾನ ನೀಡುತ್ತೇವೆ ಎಂದು ಹೇಳಿದರು.