ಕರ್ನಾಟಕ

karnataka

ETV Bharat / city

'ಮೈಸೂರಲ್ಲಿ 51 ವಿವಿಧ ವರ್ಗದ ಜನತೆಯ ಜತೆ ಪ್ರಧಾನಿ ಮೋದಿ ಯೋಗ'

ಯೋಗ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ಸಚಿವ ಎಸ್.ಟಿ.ಸೋಮಶೇಖರ್ ಮನವಿ ಮಾಡಿದರು.

ST Somashekar watched the yoga preparations at mysore
ಅರಮನೆ ಆವರಣದಲ್ಲಿ ಯೋಗ ತಾಲೀಮು ವೀಕ್ಷಿಸಿದ ಸಚಿವ ಎಸ್.ಟಿ.ಸೋಮಶೇಖರ್

By

Published : Jun 19, 2022, 2:29 PM IST

ಮೈಸೂರು:ವಿಶ್ವ ಯೋಗ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾಗವಹಿಸಲಿರುವ ಹಿನ್ನೆಲೆ, ಯೋಗ ಕಾರ್ಯಕ್ರಮದ ಅಂತಿಮ ಹಂತದ ತಾಲೀಮನ್ನು ಸಚಿವ ಎಸ್.ಟಿ.ಸೋಮಶೇಖರ್ ವೀಕ್ಷಿಸಿದರು.

ಅರಮನೆ ಆವರಣದಲ್ಲಿ ಬೆಳಗ್ಗೆ 6.30ಕ್ಕೆ 10 ಸಾವಿರಕ್ಕೂ ಅಧಿಕ ಯೋಗಪಟುಗಳಿಂದ ಯೋಗ ತಾಲೀಮು ನಡೆಸಲಾಯಿತು. ಯೋಗ ಕಾರ್ಯಕ್ರಮದ ಅಂಗವಾಗಿ ವೇದಿಕೆ ಸಿದ್ಧತೆ, ಯೋಗಪಟುಗಳಿಗೆ ಸ್ಥಳಾವಕಾಶ, ಕುಡಿಯುವ ನೀರಿನ ವ್ಯವಸ್ಥೆ, ಎಲ್ಲೆಲ್ಲಿ ಪ್ರವೇಶ ಕಲ್ಪಿಸಲಾಗಿದೆ ಎಂಬುದನ್ನು ಸಚಿವರು ಪರಿಶೀಲಿಸಿದರು.


ಇದೇ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜೂ.5 ಮತ್ತು 11ರಂದು ಯೋಗ ತಾಲೀಮು ನಡೆಸಲಾಗಿತ್ತು. ಇಂದು ಅಂತಿಮ ಹಂತದ ತಾಲೀಮು ನಡೆಸಲಾಗಿದೆ. 51 ವಿವಿಧ ವರ್ಗದ ಜನತೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಯೋಗ ಮಾಡಲಿದ್ದಾರೆ. ಪ್ರಧಾನಿ ಪಾಲ್ಗೊಳ್ಳುವ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ಪೂರ್ಣಗೊಂಡಿದೆ. ನಾಲ್ಕು ಕಡೆ ಪ್ರವೇಶ ಕಲ್ಪಿಸಲಾಗಿದೆ. ಬೆಳಗ್ಗೆ 5.30ಕ್ಕೆ ಪ್ರವೇಶದ್ವಾರ ಬಂದ್ ಆಗಲಿದೆ. ಯೋಗ ಕಾರ್ಯಕ್ರಮ ಯಶಸ್ವಿಗೆ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡುತ್ತಿದ್ದೇನೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಅರಮನೆ ಆವರಣಕ್ಕೆ ಭೇಟಿ ನೀಡಿ ಭದ್ರತಾ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಪರಿವೀಕ್ಷಣೆ ನಡೆಸಿದರು. ಈ ವೇಳೆ ಸಂಸದ ಪ್ರತಾಪ್ ಸಿಂಹ, ಶಾಸಕ ನಾಗೇಂದ್ರ, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ಹಾಜರಿದ್ದರು.

ಇದನ್ನೂ ಓದಿ:ನಾಳೆ ಚಾಮುಂಡಿ ಬೆಟ್ಟಕ್ಕೆ ಭಕ್ತಾದಿಗಳಿಗೆ ನಿರ್ಬಂಧ: ಈ ನಿಯಮಗಳನ್ನು ಪಾಲಿಸಿ..

ABOUT THE AUTHOR

...view details