ಮೈಸೂರು:ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹಾಗೂ ಮರಣ ಪ್ರಮಾಣ ಹೆಚ್ಚಾಗುತ್ತಿದೆ. ಹೀಗಾಗಿ, ಇಂದು ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ.ದೇವೇಗೌಡ ಅವರು ದೊಡ್ಡ ಕನ್ಯಾ ಗ್ರಾಮದ ಕೋವಿಡ್ ಕೇರ್ ಸೆಂಟರ್ಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಗ್ರಾಮದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗಲ ಕಾರಣವೇನೆಂದು ಆಶಾ ಕಾರ್ಯಕರ್ತೆಯರಿಗೆ ಪ್ರಶ್ನಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಶಾ ಕಾರ್ಯಕರ್ತೆಯರು, ಕಳೆದ ವರ್ಷ ಒಂದು ಪ್ರಕರಣ ಕಂಡು ಬಂದರೆ ಗ್ರಾಮದ ಜನರೇ ಭಯಪಡುತ್ತಿದ್ದರು.