ಮೈಸೂರು :ತಮ್ಮ ಕ್ಷೇತ್ರದಲ್ಲಿ ಕೊರೊನಾ ವೈರಸ್ ಬಗ್ಗೆ ಜನರಲ್ಲಿರುವ ಭಯ ಹೋಗಲಾಡಿಸಲು ಶಾಸಕರೇ ಭಿತ್ತಿ ಪತ್ರ ಹಿಡಿದು ಬೀದಿ ಬದಿಯ ವ್ಯಾಪಾರಿಗಳಿಗೆ ಜಾಗೃತಿ ಮೂಡಿಸಿರುವ ಘಟನೆ ನಂಜನಗೂಡಿನಲ್ಲಿ ನಡೆದಿದೆ.
ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಬೀದಿಗಿಳಿದ ಶಾಸಕ ಹರ್ಷವರ್ಧನ್.. - ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಹರ್ಷವರ್ಧನ್
ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಹರ್ಷವರ್ಧನ್ ಬಜಾರ್ ರಸ್ತೆಯ ಫುಟ್‌ಬಾತ್ ವ್ಯಾಪಾರಿಗಳಿಗೆ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ನೀಡಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದರು.
![ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಬೀದಿಗಿಳಿದ ಶಾಸಕ ಹರ್ಷವರ್ಧನ್.. KN_MYS_6_MLA_DOING_CORONA_AWARENESS_NEWS_7208092](https://etvbharatimages.akamaized.net/etvbharat/prod-images/768-512-6408679-thumbnail-3x2-chai.jpg)
ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಬೀದಿಗಿಳಿದ ಶಾಸಕ ಹರ್ಷವರ್ಧನ್...!
ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸಲು ಬೀದಿಗಿಳಿದ ಶಾಸಕ ಹರ್ಷವರ್ಧನ್..
ನಂಜನಗೂಡು ಕ್ಷೇತ್ರದ ಬಿಜೆಪಿ ಶಾಸಕ ಹರ್ಷವರ್ಧನ್ ಬಜಾರ್ ರಸ್ತೆಯ ಫುಟ್‌ಬಾತ್ ವ್ಯಾಪಾರಿಗಳಿಗೆ ಕೊರೊನಾ ವೈರಸ್ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿಪತ್ರಗಳನ್ನು ನೀಡಿ ಎಚ್ಚರಿಕೆಯಿಂದ ಇರುವಂತೆ ತಿಳಿಸಿದರು. ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ಜಿಲ್ಲೆಯಲ್ಲಿ ವೈರಸ್ ಭೀತಿ ಇಲ್ಲ. ಆದರೂ ಜಾಗೃತಿಯಿಂದ ಇರಬೇಕು. ಈ ದೃಷ್ಟಿಯಿಂದ ಈಗಾಗಲೇ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಂಜನಗೂಡಿನ ಜನತೆ ಆತಂಕ ಪಡುವ ಅವಶ್ಯಕತೆ ಇಲ್ಲ. ಆದರೂ ಜಾಗೃತಿ ಇರಲಿ ಎಂದು ಮನವಿ ಮಾಡಿದರು.