ಮೈಸೂರು:ಸಚಿವ ಸ್ಥಾನಕ್ಕಾಗಿ ಲಾಬಿ ಮಾಡುವುದಿಲ್ಲ, ಅದರ ಅವಶ್ಯಕತೆಯೂ ಇಲ್ಲ. ಆದರೆ, ನನ್ನ ಕೆಲಸಕ್ಕಾಗಿ ಅಗತ್ಯವಿದ್ದರಷ್ಟೇ ದೆಹಲಿಗೆ ಹೋಗುತ್ತೇನೆ ಎಂದು ಶಾಸಕ ಎಂ.ಪಿ ರೇಣುಕಾಚಾರ್ಯ ಹೇಳಿದರು.
ಸಚಿವ ಸ್ಥಾನಕ್ಕಾಗಿ ಲಾಬಿ ಮಾಡಲ್ಲ- ಶಾಸಕ ಎಂ.ಪಿ ರೇಣುಕಾಚಾರ್ಯ ಸುತ್ತೂರು ಕ್ಷೇತ್ರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜಕಾರಣದಲ್ಲಿ ಅಪೇಕ್ಷೆ ಇರುವುದು ತಪ್ಪಲ್ಲ. ಆದರೆ, ಅತಿಯಾಸೆ ಇರಬಾರದು. ಸಚಿವ ಸಂಪುಟ ವಿಸ್ತರಣೆಯಲ್ಲಿ ಪಕ್ಷದ ಹೈಕಮಾಂಡ್ ಹಾಗೂ ಮುಖ್ಯಮಂತ್ರಿಗಳು ಸೂಕ್ತ ನಿರ್ಧಾರ ತೆಗೆದುಕೊಂಡಿದ್ದಾರೆ. ಸಚಿವ ಸ್ಥಾನ ಕೈತಪ್ಪಿದ್ದಕ್ಕೆ ನನಗೆ ಬೇಸರವಿಲ್ಲ. ಮುಂದಿನ ದಿನಗಳಲ್ಲಿ ಕಾದು ನೋಡೋಣ ಎಂದರು.
ಶಾಸಕ ರಾಮದಾಸ್ ಹಾಗೂ ನಾನು ಭೇಟಿಯಾಗಿರುವುದು ರಾಜಕೀಯಕ್ಕಾಗಿ ಅಲ್ಲ. ನಾವಿಬ್ಬರೂ ಸ್ನೇಹಿತರು. ಇದರಲ್ಲಿ ರಾಜಕೀಯ ಬೇಡ. ನನ್ನ ಕ್ಷೇತ್ರದಲ್ಲಿ ಅಭಿವೃದ್ಧಿ ಮಾಡುವುದು ನನ್ನ ಕೆಲಸ. ನಾನು ಸಚಿವನಾಗಲಿ ಎಂದು ರಾಜಕೀಯಕ್ಕೆ ಬಂದಿಲ್ಲ. ಜನ ಗೆಲ್ಲಿಸಿದರು. ಆಗ ಸಚಿವ ಸ್ಥಾನ ಸಿಕ್ಕಿತ್ತು. ಸಚಿವ ಸ್ಥಾನಕ್ಕಾಗಿ ನಾನು ಈಗ ಯಾವುದೇ ಲಾಬಿ ಮಾಡುತ್ತಿಲ್ಲ ಎಂದು ಮಾಜಿ ಸಚಿವ ರೇಣುಕಾಚಾರ್ಯ ಸ್ಪಷ್ಟಪಡಿಸಿದರು.
ಇದನ್ನೂ ಓದಿ:ನಾನು ರಾಜಕಾರಣ ಬಿಟ್ಟು ಬಹಳ ವರ್ಷಗಳೇ ಕಳೆದಿವೆ: ಮಾಜಿ ಸಿಎಂ ಎಸ್. ಎಂ. ಕೃಷ್ಣ