ಮೈಸೂರು:ದಕ್ಷಿಣ ಪದವೀಧರ ಕ್ಷೇತ್ರದ ಚುನಾವಣೆಗೆ ಇಂದು ಮತದಾನ ಆರಂಭವಾಗಿದೆ. ಅಭ್ಯರ್ಥಿಗಳು ತಮ್ಮ ತಮ್ಮ ಮತಕ್ಷೇತ್ರಗಳಿಗೆ ಬೆಳಗ್ಗೆಯೇ ಆಗಮಿಸಿ ಮತದಾನ ಮಾಡುತ್ತಿದ್ದಾರೆ. ಇದರ ಜೊತೆಗೆ ಸಮಾಜದ ವಿವಿಧ ಗಣ್ಯರು, ಸ್ವಾಮೀಜಿಗಳು ಸೇರಿದಂತೆ ಹಲವರು ಮತದಾನ ಮಾಡಿದ್ದಾರೆ.
ಸಂಸದ ಪ್ರತಾಪ್ ಸಿಂಹ, ಸುತ್ತೂರಿನ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಜೆಡಿಎಸ್ ಅಭ್ಯರ್ಥಿ ರಾಮು, ಬಿಜೆಪಿ ಅಭ್ಯರ್ಥಿ ಮೈ.ವಿ ರವಿಶಂಕರ್ ಸೇರಿದಂತೆ ಪ್ರಮುಖರು ಮತ ಚಲಾಯಿಸಿದ್ದಾರೆ. ಮೈಸೂರು, ಮಂಡ್ಯ, ಹಾಸನ ಹಾಗೂ ಚಾಮರಾಜನಗರ ಜಿಲ್ಲೆಯ ಪದವೀಧರರು ಸಂಜೆ ಐದು ಗಂಟೆಯವರೆಗೆ ಮತದಾನ ಮಾಡಲಿದ್ದಾರೆ.
ಮೈಸೂರಿನ ಕುವೆಂಪು ನಗರದ ಮತಗಟ್ಟೆ ಸಂಖ್ಯೆ 42ರಲ್ಲಿ ಬೆಂಬಲಿಗರೊಂದಿಗೆ ಆಗಮಿಸಿದ ಹೆಚ್.ಕೆ ರಾಮು ಮತದಾನ ಮಾಡಿದರು. ಮೈಸೂರಿನ ಚಾಮುಂಡಿ ಪುರಂನ ಬಾಲಬೋಧಿನಿ ಶಾಲೆಯಲ್ಲಿ ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಮತದಾನ ಮಾಡಿದರು. ಇದೇ ವೇಳೆ, ಮಾತನಾಡಿದ ಅವರು, ಎಲ್ಲ ಮತದಾರರು ಕಡ್ಡಾಯವಾಗಿ ಮತದಾನ ಮಾಡುವಂತೆ ಮನವಿ ಮಾಡಿದರು.