ಮೈಸೂರು:ಜೆಡಿಎಸ್ ತೊರೆದು ಬಿಜೆಪಿಗೆ ಸೇರುವುದಾಗಿ ಹೇಳಿದ್ದ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ (MLC Sandesh Nagaraj) ಅವರು ತಾವು ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ (Karnataka legislative council Election) ಸ್ಪರ್ಧಿಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಂದೇಶ್ ನಾಗರಾಜ್, ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸುವ ಇಚ್ಛೆ ವ್ಯಕ್ತಪಡಿಸಿದ್ದೆ. ಆದರೆ, ಪಕ್ಷದ ನಿಯಮದಂತೆ ವಯೋಮಿತಿಯ ಕಾರಣಕ್ಕೆ ಟಿಕೆಟ್ ಕೈ ತಪ್ಪಿದೆ. ನನಗೆ ಟಿಕೆಟ್ ನೀಡಲು ಶ್ರಮಿಸಿದ ಎಲ್ಲರಿಗೂ ವಂದಿಸುತ್ತೇನೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ: ಜೆಡಿಎಸ್ಗೆ ಗುಡ್ ಬೈ - ಮೂರು ದಿನದಲ್ಲಿ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆ: ಸಂದೇಶ್ ನಾಗರಾಜ್