ಕರ್ನಾಟಕ

karnataka

ETV Bharat / city

ಮೈಸೂರಿನ ರೈಲ್ವೆ, ವಿಮಾನ ನಿಲ್ದಾಣ ಮರುನಾಮಕರಣಕ್ಕೆ ಸಂಸದ ಪ್ರತಾಪಸಿಂಹ ‌ಮನವಿ - ಸಿಎಂ ಬಿಎಸ್​ವೈಗೆ ಪ್ರತಾಪ್ ಸಿಂಹ ಪತ್ರ

ಮೈಸೂರು ರೈಲ್ವೆ ನಿಲ್ದಾಣ ಹಾಗೂ ಮೈಸೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ.

mp pratap simha letter on renaming mysore railway station
ಮೈಸೂರಿನ ರೈಲ್ವೆ, ವಿಮಾನ ನಿಲ್ದಾಣ ಮರುನಾಮಕರಣಕ್ಕೆ ಸಂಸದ ಪ್ರತಾಪಸಿಂಹ ‌ಮನವಿ

By

Published : Jul 3, 2021, 11:58 PM IST

ಮೈಸೂರು:ಮೈಸೂರು ರೈಲ್ವೆ ನಿಲ್ದಾಣ ಹಾಗೂ ಮೈಸೂರು ವಿಮಾನ ನಿಲ್ದಾಣಕ್ಕೆ ಮರುನಾಮಕರಣ ಮಾಡುವಂತೆ ಸಂಸದ ಪ್ರತಾಪಸಿಂಹ ಅವರು ಪತ್ರ ಬರೆದು ಸಿಎಂ ಬಿಎಸ್​ವೈ ಮತ್ತು ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

ಮೈಸೂರು ರೈಲ್ವೆ ನಿಲ್ದಾಣವನ್ನು ನಾಲ್ವಡಿ ಕೃಷ್ಣರಾಜ ಒಡೆಯರ್, ಮೈಸೂರು ಜಂಕ್ಷನ್ ಎಂದು ಮರುನಾಮಕರಣ ಮಾಡುವಂತೆ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪ್ರತಾಪ್ ಸಿಂಹ ಪತ್ರ ಬರೆದಿದ್ದಾರೆ.

ಕೇಂದ್ರ ಸಚಿವರಿಗೆ ಪತ್ರ ಬರೆದಿರುವ ಸಂಸದ ಪ್ರತಾಪ್ ಸಿಂಹ

ಜೊತೆಗೆ ಮೈಸೂರು ವಿಮಾನ ನಿಲ್ದಾಣವನ್ನು ಜಯಚಾಮರಾಜ ಒಡೆಯರ್ ವಿಮಾನ ನಿಲ್ದಾಣ ಎಂದು ಮರುನಾಮಕರಣ ಮಾಡುವಂತೆ ಕೋರಿ ಕೇಂದ್ರ ವಿಮಾನಯಾನ ಸಚಿವ ಹರದೀಪ್ ಸಿಂಗ್ ಪುರಿ, ಅವರಿಗೆ ಸಂಸದ ಪ್ರತಾಪಸಿಂಹ ಪತ್ರದ ಮೂಲಕ ಮನವಿ ಮಾಡಿದ್ದಾರೆ.

ಇದನ್ನೂ ಓದಿ:UNLOCK 3.0 ಮುಖ್ಯಾಂಶಗಳು: ಜುಲೈ 5 ರಿಂದ ರಾಜ್ಯದಲ್ಲಿ ಯಾವುದಕ್ಕೆಲ್ಲಾ ಅವಕಾಶ?

ABOUT THE AUTHOR

...view details