ಮೈಸೂರು:ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ತಮ್ಮ ಟ್ವಿಟ್ಟರ್ ಖಾತೆಯ ಮೂಲಕ ಸಂಸದರು ಮಾಹಿತಿ ನೀಡಿದ್ದಾರೆ.
ಸಂಸದ ಪ್ರತಾಪ್ ಸಿಂಹಗೆ ವಕ್ಕರಿಸಿದ ಕೊರೊನಾ - ಪ್ರತಾಪ್ ಸಿಂಹಗೆ ಕೋವಿಡ್ ದೃಢ
ಸಂಸದ ಪ್ರತಾಪ್ ಸಿಂಹ ಅವರಿಗೆ ಕೊರೊನಾ ಸೋಂಕು ತಗುಲಿದೆ. ಈ ಕುರಿತಂತೆ ಅವರು ಟ್ವೀಟ್ ಮೂಲಕ ದೃಢಪಡಿಸಿದ್ದಾರೆ.
ಸಂಸದ ಪ್ರತಾಪ್ ಸಿಂಹಗೆ ಕೊರೊನಾ ದೃಢ
ಟ್ವಿಟ್ಟರ್ ಮೂಲಕ ಮಾಹಿತಿ ನೀಡಿರುವ ಪ್ರತಾಪ್ ಸಿಂಹ, ನನ್ನ ಸಂಪರ್ಕದಲ್ಲಿದ್ದವರು ಕೋವಿಡ್ ಟೆಸ್ಟ್ ಮಾಡಿಸಿ ಎಂದು ಮನವಿ ಮಾಡಿದ್ದಾರೆ.
ಸಂಸದರು ಸೋಮವಾರ ಮತ್ತು ಮಂಗಳವಾರ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಎಸ್.ಟಿ. ಸೋಮಶೇಖರ್ ಮುಡಾ ಅಧ್ಯಕ್ಷ ರಾಜೀವ್, ಶಾಸಕ ನಾಗೇಂದ್ರ ಸೇರಿದಂತೆ ಹಲವರು ಕಾರ್ಯಕ್ರಮದಲ್ಲಿ ಇದ್ದರು.