ಕರ್ನಾಟಕ

karnataka

ETV Bharat / city

ಸಿದ್ದರಾಮಯ್ಯಗೆ ದೇವಸ್ಥಾನದ ಬಗ್ಗೆ ಪ್ರೀತಿ ಇದ್ದಿದ್ದರೆ ಟಿಪ್ಪು ಜಯಂತಿ ಮಾಡುತ್ತಿರಲಿಲ್ಲ: ಪ್ರತಾಪ್​​ ಸಿಂಹ ತಿರುಗೇಟು - ಸಂಸದ ಪ್ರತಾಪ್​​ ಸಿಂಹ

''ಸಿದ್ದರಾಮಯ್ಯ ಅವರೇ ನೀವು ದೇವಸ್ಥಾನ ಉಳಿಸಿಕೊಳ್ಳಲು ಯಾವ ಪ್ರಯತ್ನವನ್ನೂ ನಿಮ್ಮ ಆಡಳಿತದಲ್ಲಿ ಮಾಡಲಿಲ್ಲ. ನಿಮಗೆ ದೇವಸ್ಥಾನದ ಬಗ್ಗೆ ಪ್ರೀತಿ ಇದ್ದಿದ್ದರೆ ಟಿಪ್ಪು ಜಯಂತಿ ಮಾಡುತ್ತಿರಲಿಲ್ಲ'' ಎಂದು ಸಂಸದ ಪ್ರತಾಪ್​​ ಸಿಂಹ ಗುಡುಗಿದ್ದಾರೆ.

mp prathap simha
ಸಂಸದ ಪ್ರತಾಪ್​​ ಸಿಂಹ

By

Published : Sep 17, 2021, 12:20 PM IST

ಮೈಸೂರು: ಸಿದ್ದರಾಮಯ್ಯಗೆ ದೇವಸ್ಥಾನದ ಬಗ್ಗೆ ಪ್ರೀತಿ ಇದ್ದಿದ್ದರೆ ವಿಗ್ರಹ ಭಂಜಕ ಟಿಪ್ಪು ಜಯಂತಿ ಮಾಡುತ್ತಿರಲಿಲ್ಲ ಎಂದು ಸಂಸದ ಪ್ರತಾಪ್​​ ಸಿಂಹ ಕುಟುಕಿದರು. ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರೇ ನೀವು ದೇವಸ್ಥಾನ ಉಳಿಸಿಕೊಳ್ಳಲು ಯಾವ ಪ್ರಯತ್ನವನ್ನೂ ನಿಮ್ಮ ಆಡಳಿತದಲ್ಲಿ ಆಗಲಿಲ್ಲ. ನಿಮಗೆ ದೇವಸ್ಥಾನ ಬಗ್ಗೆ ಪ್ರೀತಿ ಇದ್ದಿದ್ದರೆ ಟಿಪ್ಪು ಜಯಂತಿ ಮಾಡುತ್ತಿರಲಿಲ್ಲ. ವೋಟಿಗಾಗಿ ವೀರಶೈವ - ಲಿಂಗಾಯತ ಜಾತಿ ಒಡೆಯುತ್ತಿರಲಿಲ್ಲ ಎಂದು ಟೀಕಿಸಿದರು.

ಸಂಸದ ಪ್ರತಾಪ್​​ ಸಿಂಹ

ಸಿದ್ದರಾಮಯ್ಯ ಆಡಳಿತದಲ್ಲಿ ಕೋರ್ಟ್‌ಗೆ ವರದಿ ಕೊಡಬೇಕಿತ್ತು. 8 ವಾರದಲ್ಲಿ ವರದಿ ನೀಡಲು ಕೋರ್ಟ್ ಗಡುವು ನೀಡಿತ್ತು. 2018ರ ಫೆ. 6 ರಂದು ದೇವಸ್ಥಾನ ತೆರವು ವಿಚಾರದಲ್ಲಿ ಅಂತಿಮ‌ ಆದೇಶ ಕೊಟ್ಟಿದೆ. ಈ ಆದೇಶವನ್ನು ನಿಮಗೂ ಐಎಎಸ್ ಅಧಿಕಾರಿಗಳು ಸರಿಯಾಗಿ ವಿವರಿಸಿಲ್ಲ ಎಂದು ಹೇಳಿದರು.

ಅಧಿಕಾರಿಗಳು ಸೂಕ್ತ ರೀತಿಯಲ್ಲಿ ಕೆಲಸ ಮಾಡಬೇಕಿದೆ:

ಬಿಜೆಪಿ ಸರ್ಕಾರದಲ್ಲಿಯೂ ಅಧಿಕಾರಿಗಳು ತಪ್ಪು ಮಾಡಿದ್ದಾರೆ. ಆಡಳಿತಾತ್ಮಕ ವಿಚಾರದಲ್ಲಿ ಐಎಎಸ್ ಅಧಿಕಾರಿಗಳು ಸರ್ಕಾರಕ್ಕೆ ಸರಿಯಾದ ವಿವರಣೆ ನೀಡುತ್ತಿಲ್ಲ. ರಾಜಕಾರಣಿಗಳು ಅಧಿಕಾರಿಗಳು ಮಾಡುವ ತಪ್ಪನ್ನು ತಮ್ಮ ಮೇಲೆ ಎಳೆದುಕೊಳ್ಳಬೇಡಿ ಎಂದರು.

ಆಡಳಿತಾತ್ಮಕ ಚುಕ್ಕಾಣಿ ಅಧಿಕಾರಿಗಳಿಗೆ ಕೊಟ್ಟಿರುತ್ತೇವೆ:

ಶಿಕ್ಷಣ ಪಡೆಯದವರು ಸಹ ರಾಜಕಾರಣಿಗಳಾಗಬಹುದು. ಆದರೆ, ಇಡೀ ಆಡಳಿತಾತ್ಮಕ ಚುಕ್ಕಾಣಿಯನ್ನು ಅಧಿಕಾರಿಗಳಿಗೆ ಕೊಡುತ್ತೇವೆ. ಕಾರಣ, ಆಡಳಿತದ ವಿಚಾರದಲ್ಲಿ ಇವರಿಗೆ ಎಲ್ಲವೂ ತಿಳಿದಿರುತ್ತದೆ. ಇವರು ಐಎಎಸ್‌ಗಳಾಗಿ ಎಲ್ಲವನ್ನು ತಿಳಿದಿರುತ್ತಾರೆ ಅಂತ‌ ಎಂದು ಹೇಳಿದ ಪ್ರತಾಪ್​​ ಸಿಂಹ ದೇಗುಲ ತೆರವಿನ ವಿಚಾರದ ಕುರಿತಾಗಿ ಸುಪ್ರೀಂಕೋರ್ಟ್ ಆದೇಶವನ್ನು ಓದಿ ಮಾಹಿತಿ ನೀಡಿದರು.

ದೇಗುಲ ಒಡೆಯುವ ಮುನ್ನ ಮಾಹಿತಿ ನೀಡಬೇಕು. ಅಧಿಕಾರಿಗಳು ಮಾಡಿದ ಈ ಗೊಂದಲವನ್ನು ನೀವು ಮೈಮೇಲೆ ಎಳೆದುಕೊಳ್ಳಬೇಡಿ ಎಂದು ತಿಳಿಸಿದರು. ದೇಗುಲ ತೆರವಿನ ವಿಚಾರದ ಬಗ್ಗೆ ಮಾತಾಡುತ್ತಿದ್ದೇನೆ. ಇದು ಆ ಸರ್ಕಾರ ಈ ಸರ್ಕಾರ ಎಂದು ಮಾತನಾಡುವುದಿಲ್ಲ. ಇದು ತಾರ್ಕಿಕ ಅಂತ್ಯ ಕಾಣಬೇಕಾದರೆ ಈ ಬಗ್ಗೆ ಸೂಕ್ತ ತೀರ್ಮಾನ ಕೈಗೊಳ್ಳಬೇಕಾಗಿದೆ. ಆದರೆ ಇದನ್ನು ಆರೋಪ ಪ್ರತ್ಯಾರೋಪ ಮಾಡ್ತಿದ್ದಾರೆ ಎಂದರು.

ಇದನ್ನೂ ಓದಿ:ದೇವಸ್ಥಾನ ನೆಲಸಮಗೊಳಿಸುವ ವಿಚಾರ ಸರ್ಕಾರಕ್ಕೆ ಮೊದಲೇ ಗೊತ್ತಿತ್ತು: ಸಿದ್ದರಾಮಯ್ಯ ನೇರ ಆರೋಪ

ಸಿದ್ದರಾಮಯ್ಯ ಅವರು ಅಧಿಕಾರದಲ್ಲಿ ಇದ್ದರೂ ಕೂಡ ಮಿಸ್ ಲೀಡ್ ಆಗಿದೆ. ಇಲ್ಲಿ ಅಧಿಕಾರಿಗಳು ನಿಮಗೆ ಹೇಗೆ ಮಿಸ್ ಲೀಡ್ ಮಾಡಿದ್ರು ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು. ಇದನ್ನು ಕೆಡಿಪಿ ಸಭೆಯಲ್ಲಿ ನಾನು ಮಾತಾಡಿದೆ. ಆ ವೇಳೆ ಜಿಲ್ಲಾಧಿಕಾರಿಗಳು ಸುಪ್ರೀಂಕೋರ್ಟ್ ಆದೇಶ ಇದೆ ಎಂದರು. ಸುಪ್ರೀಂಕೋರ್ಟ್‌ನ ಆದೇಶ ಮೊದಲು ಅರ್ಥ ಮಾಡಿಕೊಳ್ಳಬೇಕು ಎಂದರು.

ಮುಂದಿನ 25 ವರ್ಷ ಕಾಂಗ್ರೆಸ್ ಪಕ್ಷ ನಿರುದ್ಯೋಗಿ:

ಪ್ರಧಾನಿ ಮೋದಿ ಅವರ ಹುಟ್ಟುಹಬ್ಬವನ್ನು ಕಾಂಗ್ರೆಸ್ ಪಕ್ಷದವರು ನಿರುದ್ಯೋಗ ದಿವಸ ಅಂತಾ ಆಚರಣೆ ಮಾಡುತ್ತಿದ್ದಾರೆ. ಅವರನ್ನು ಮುಂದಿನ 25 ವರ್ಷ ನಿರುದ್ಯೋಗಿಗಳನ್ನಾಗಿ ಮಾಡುತ್ತೇವೆ ಎಂದು ವಾಗ್ದಾಳಿ ನಡೆಸಿದರು.

ABOUT THE AUTHOR

...view details