ಮೈಸೂರು:ಭೀಕರ ಸಾಂಕ್ರಾಮಿಕ ರೋಗಕ್ಕೆ ಇಡೀ ಪ್ರಪಂಚವೇ ತಲ್ಲಣಗೊಂಡಿದೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಲೆಕ್ಕ ಕೇಳುತ್ತಿರುವುದು ಸರಿಯಲ್ಲ. ಅದಕ್ಕೆ ಸಮಯ ಇದಲ್ಲ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿದರು.
ಇಂದು ತಮ್ಮ ಸ್ವಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಸರಲ್ಲಿ ಸಾವಿರಾರು ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಲೆಕ್ಕ ಕೊಡಿ ಎಂದು ಕೇಳುತ್ತಿರುವುದು ಸರಿಯಲ್ಲ. ಲೆಕ್ಕ ಕೊಡಿ ಎಂದು ಕೇಳುವುದು ತಪ್ಪಲ್ಲ. ಆದರೆ ಅದಕ್ಕೆ ಇದು ಸರಿಯಾದ ಸಮಯ ಅಲ್ಲ ಎಂದರು.