ಮೈಸೂರು: ಕೋರ್ ಕಮಿಟಿ ಕಳುಹಿಸಿದ ಪಟ್ಟಿಯಲ್ಲಿ ಹೆಚ್. ವಿಶ್ವನಾಥ್ ಅವರ ಹೆಸರಿತ್ತು. ಆದರೆ, ವರಿಷ್ಠರ ತೀರ್ಮಾನದ ವೇಳೆ ಅವರ ಹೆಸರು ಕೈಬಿಟ್ಟಿದ್ದಾರೆ, ಅದು ವರಿಷ್ಠರ ತೀರ್ಮಾನ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿಕೆ ನೀಡಿದ್ದಾರೆ.
ಹೆಚ್.ವಿಶ್ವನಾಥ್ ಕೈತಪ್ಪಿದ ಪರಿಷತ್ ಟಿಕೆಟ್... ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದ್ದೇನು? - mysore news
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಹೆಚ್. ವಿಶ್ವನಾಥ್ ಸಹ ಕಾರಣರಾಗಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಯಾವ ರೀತಿ ಅವಕಾಶ ಮಾಡಿಕೊಡಬೇಕು ಎಂಬ ಬಗ್ಗೆ ಸಿಎಂ ಯಡಿಯೂರಪ್ಪ ಅವರ ಬಳಿ ಹೆಚ್ ವಿಶ್ವನಾಥ್ ಚರ್ಚೆ ಮಾಡಲಿ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಸಲಹೆ ನೀಡಿದ್ದಾರೆ.
![ಹೆಚ್.ವಿಶ್ವನಾಥ್ ಕೈತಪ್ಪಿದ ಪರಿಷತ್ ಟಿಕೆಟ್... ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಹೇಳಿದ್ದೇನು? Mp v.srinivas prasad statement about h vishwanath lost mlc ticket](https://etvbharatimages.akamaized.net/etvbharat/prod-images/768-512-7668503-774-7668503-1592474863014.jpg)
ಇಂದು ತಮ್ಮ ಸ್ವಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಂಎಲ್ಸಿ ಟಿಕೆಟ್ ನೀಡುವ ಬಗ್ಗೆ ಹೆಚ್. ವಿಶ್ವನಾಥ್ ಜೊತೆ ಯಡಿಯೂರಪ್ಪ ಮಾತುಕತೆ ನಡೆಸಿದ್ದರು. ಅದರಂತೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಕಳುಹಿಸಿದ ಪಟ್ಟಿಯಲ್ಲಿ ಹೆಚ್.ವಿಶ್ವನಾಥ್ ಅವರ ಹೆಸರಿತ್ತು. ಆದರೆ, ದೆಹಲಿಯ ವರಿಷ್ಠರು ತೀರ್ಮಾನ ಮಾಡಿದ ಪಟ್ಟಿಯಲ್ಲಿ ಅವರ ಹೆಸರಿಲ್ಲ. ಇದನ್ನು ಹೈಕಮಾಂಡ್ ಫೈನಲ್ ಮಾಡಿದ್ದು, ಈ ಪಟ್ಟಿಯಲ್ಲಿ ಬದಲಾವಣೆ ಇಲ್ಲ ಎಂದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಹೆಚ್. ವಿಶ್ವನಾಥ್ ಸಹ ಕಾರಣರಾಗಿದ್ದು, ಮುಂದಿನ ದಿನಗಳಲ್ಲಿ ಅವರಿಗೆ ಯಾವ ರೀತಿ ಅವಕಾಶ ಮಾಡಿಕೊಡಬೇಕು ಎಂಬ ಬಗ್ಗೆ ಯಡಿಯೂರಪ್ಪನವರ ಬಳಿ ವಿಶ್ವನಾಥ್ ಚರ್ಚೆ ಮಾಡಲಿ ಎಂದು ಸಲಹೆ ನೀಡಿದರು.