ಮೈಸೂರು :ಜಿಲ್ಲೆಯಲ್ಲಿಂದು ಯುವಕನೋರ್ವನ ಮೇಲೆ ಚಾಕು ಇರಿದು ದಾಳಿ ಮಾಡಿದ್ದು, ನೆತ್ತರು ಹರಿದಿದೆ. ವಿವಾಹೇತರ ಸಂಬಂಧ ಶಂಕೆ ಹಿನ್ನೆಲೆ ಯುವಕನಿಗೆ ಚಾಕುವಿನಿಂದ ಇರಿದಿರುವ ಘಟನೆ ತಿ.ನರಸೀಪುರ ತಾಲೂಕಿನ ವಾಟಾಳು ಗ್ರಾಮದಲ್ಲಿ ನಡೆದಿದೆ.
ವಿವಾಹೇತರ ಸಂಬಂಧ ಶಂಕೆ : ತಿ. ನರಸೀಪುರದಲ್ಲಿ 'ಸಿಪಾಯಿ'ಗೆ ಚಾಕು ಇರಿತ - ಅಕ್ರಮ ಸಂಬಂಧ ಶಂಕೆ
ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವಕನನ್ನು ಸ್ಥಳೀಯರು ಮೈಸೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯುವಕನಿಗೆ ಚಾಕು ಇರಿತ
ಗ್ರಾಮದ ಸಿಪಾಯಿ ಚಾಕು ಇರಿತಕ್ಕೊಳಗಾದ ಯುವಕ. ಕುಮಾರ್ ಎಂಬುವನು ತನ್ನ ಪತ್ನಿಯ ಜೊತೆ ಸಿಪಾಯಿ ವಿವಾಹೇತರ ಸಂಬಂಧ ಹೊಂದಿದ್ದಾನೆ ಎಂದು ಅನುಮಾನಿಸಿದ್ದ. ಇದರಿಂದ ಸಿಪಾಯಿಯ ಮೇಲೆ ಚಾಕುವಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಸಿಪಾಯಿಯನ್ನು ಸ್ಥಳೀಯರು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ತಿ. ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jun 19, 2021, 7:52 PM IST