ಮೈಸೂರು: ಎನ್. ಆರ್. ಕ್ಷೇತ್ರದ ಶಾಸಕ ತನ್ವೀರ್ ಸೇಠ್ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಆರೋಪಿಯನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣ: ಮೈಸೂರು ಪೊಲೀಸರಿಂದ 8 ನೇ ಆರೋಪಿ ಬಂಧನ - Mysore Murder of MLA Tanvir Seth news
ಶಾಸಕ ತನ್ವೀರ್ ಸೇಠ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡವು ಮತ್ತೋರ್ವ ಆರೋಪಿಯನ್ನು ಶನಿವಾರ ರಾತ್ರಿ ಬಂಧಿಸಿದ್ದಾರೆ. ಗೌಸಿಯಾನಗರದ ನಿವಾಸಿ ಮತೀನ್ ಬೇಗ್ (45) ಬಂಧಿತ ಆರೋಪಿ. ಇನ್ನು, ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೇ ಏರಿದೆ.
ತನ್ವೀರ್ ಸೇಠ್ ಹಲ್ಲೆ ಪ್ರಕರಣ
ಗೌಸಿಯಾನಗರದ ನಿವಾಸಿ ಮತೀನ್ ಬೇಗ್ (45) ಬಂಧಿತ ಆರೋಪಿ. ಈ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 8 ಕ್ಕೇ ಏರಿದೆ.
ನ. 17ರ ರಾತ್ರಿ ಬನ್ನಿಮಂಟಪದ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಶಾಸಕ ತನ್ವೀರ್ ಸೇಠ್ ಮೇಲೆ ಯುವಕನೋರ್ವ ಹಲ್ಲೆ ನಡೆಸಿದ್ದ. ಈ ಕುರಿತಂತೆ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸಿದ ಪೊಲೀಸರು 7 ಜನರನ್ನು ಬಂಧಿಸಿದ್ದರು. ಸದ್ಯ 8 ನೇ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಇನ್ನು ಕೆಲವು ದಿನಗಳಲ್ಲಿ ಪ್ರಕರಣದ ವಿವರಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಲಿದ್ದಾರೆ.