ಮೈಸೂರು :ಮೈಸೂರು ಕೇಂದ್ರ ಕಾರಾಗೃಹದಲ್ಲಿನ ಕೈದಿಗಳ ಭೇಟಿಗೆ ಅವರ ಸಂಬಂಧಿಕರಿಗೆ ಮಾರ್ಚ್ 21ರಂದು ಅವಕಾಶ ನೀಡಲಾಗಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸಿ ಭೇಟಿ ನೀಡಲು ಅವಕಾಶ ಕಲ್ಪಿಸಲಾಗಿದೆ.
ಈ ಹಿಂದೆ ಕೋವಿಡ್ ಹಿನ್ನೆಲೆಯಲ್ಲಿ ಕೈದಿಗಳ ಭೇಟಿಗೆ ನಿರ್ಬಂಧ ಹೇರಲಾಗಿತ್ತು. ಆದರೆ, ಈಗ ಕೋವಿಡ್ ನಿಯಮಗಳನ್ನು ಪಾಲಿಸಿಕೊಂಡು ನಿಗದಿತ ಸಮಯದಲ್ಲಿ ಕೈದಿಗಳ ಭೇಟಿಗೆ ಅವಕಾಶ ಕಲ್ಪಿಸಲಾಗಿದೆ.
ಸಂದರ್ಶನಕ್ಕೆ ಬರುವವರು ಮುಂಚಿತವಾಗಿಯೇ ಕಾರಾಗೃಹದ ಇಮೇಲ್, ವಾಟ್ಸ್‌ಆ್ಯಪ್ ಅಥವಾ ದೂರವಾಣಿ ಮುಖಾಂತರ ಸಂಪರ್ಕಿಸಿ ತಮ್ಮ ವಿವಿರಗಳನ್ನು ನೀಡಿ ನೋಂದಾಯಿಸಿಕೊಳ್ಳುವಂತೆ ಸೂಚಿಸಿದ್ದಾರೆ.
ಜೈಲು ಅಧಿಕಾರಿಗಳು ಸೂಚಿಸಿದ ದಿನಾಂಕ ಮತ್ತು ಸಮಯದಲ್ಲಿ ಭೇಟಿಗೆ ಅವಕಾಶವಿದೆ. ಕೈದಿಗಳ ಭೇಟಿಗೆ ಬರುವ ವ್ಯಕ್ತಿಗಳು ಕೋವಿಡ್ ರೋಗ ಲಕ್ಷಣಗಳನ್ನು ಹೊಂದಿರಬಾರದು ಹಾಗೂ ಕಡ್ಡಾಯವಾಗಿ ಎರಡು ಲಸಿಕೆಗಳನ್ನು ಹಾಕಿಸಿಕೊಂಡಿರಬೇಕು. ಜೊತೆಗೆ ಲಸಿಕೆ ಪ್ರಮಾಣ ಪತ್ರವನ್ನು ಹಾಜರುಪಡಿಸಬೇಕು ಎಂದು ಕಾರಾಗೃಹದ ಮೂಲಗಳು ತಿಳಿಸಿವೆ.
ಓದಿ :ಉಕ್ರೇನ್ ಪ್ರಾದೇಶಿಕ ಸಮಗ್ರತೆಯನ್ನು ಕಾಪಾಡಿ, ನ್ಯಾಯ ಒದಗಿಸುವ ಸಮಯ ಬಂದಿದೆ: ಝೆಲೆನ್ಸ್ಕಿ