ಮೈಸೂರು: ಲಾಕ್ಡೌನ್ ನಡುವೆಯೂ ಬಾಲ್ಯ ವಿವಾಹ ನಡೆದ ಘಟನೆ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದಲ್ಲಿ ನಡೆದಿದೆ.
ಲಾಕ್ಡೌನ್ ನಡುವೆಯೂ ನಡೆದ ಬಾಲ್ಯ ವಿವಾಹ: ವರ ಪೊಲೀಸರ ವಶಕ್ಕೆ - Mysore Child marriage news
ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ದೇವಾಲಯದಲ್ಲಿ ಅಪ್ರಾಪ್ತ ಬಾಲಕಿಗೆ ವಿವಾಹ ಮಾಡಲಾಗಿದ್ದು, ಮದುವೆ ಗಂಡನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಬಾಲ್ಯ ವಿವಾಹ
ಜಿಲ್ಲೆಯ ನಂಜನಗೂಡು ತಾಲೂಕಿನ ಹಲ್ಲರೆ ಗ್ರಾಮದ ದೇವಾಲಯದಲ್ಲಿ ಅಪ್ರಾಪ್ತ ಬಾಲಕಿಗೆ ಆಕೆಯ ಕುಟುಂಬಸ್ಥರೆಲ್ಲಾ ಸೇರಿಕೊಂಡು ಹುರ ಗ್ರಾಮದ ವರನ ಜೊತೆ ಮದುವೆ ಮಾಡಿಸಲು ಸಿದ್ಧತೆ ನಡೆಸಿದ್ದರು.
ಈ ಹಿನ್ನೆಲೆ ಅಧಿಕಾರಿಗಳು ಮದುವೆ ಗಂಡು ರವಿಕುಮಾರ್ನನ್ನು ಪೊಲೀಸರಿಗೆ ಒಪ್ಪಿಸಿದ್ದು, ಅಧಿಕಾರಿಗಳೇ ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ರವಿಕುಮಾರ್ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.