ಮೈಸೂರು:ತೆರಿಗೆ ಹಣ ಪಾವತಿ ಮಾಡದೇ ಇರುವ ಅಂಗಡಿಗಳಿಗೆ ನಗರ ಪಾಲಿಕೆ ಅಧಿಕಾರಿಗಳು ಭೇಟಿ ನೀಡಿ ಒಂದೇ ದಿನದಲ್ಲಿ 6 ಲಕ್ಷ ರೂಪಾಯಿ ತೆರಿಗೆ ಸಂಗ್ರಹ ಮಾಡಿದ್ದಾರೆ.
ಆಸ್ತಿ ತೆರಿಗೆ ಸಂಗ್ರಹ ಚುರುಕುಗೊಳಿಸಲು ವಿವಿಧ ರೀತಿಯಲ್ಲಿ ಪ್ರಯತ್ನ ಮಾಡುತ್ತಿರುವ ಮಹಾನಗರ ಪಾಲಿಕೆಯ ಅಧಿಕಾರಿಗಳು ಅಂಗಡಿಗಳಿಗೆ ತೆರಳಿ ತೆರಿಗೆ ಸಂಗ್ರಹಿಸುತ್ತಿದ್ದು , ನಗರದ ಚಿಕ್ಕಗಡಿಯಾರ, ದೇವರಾಜ ಅರಸು ರಸ್ತೆ ಹಾಗೂ ಸುತ್ತಮುತ್ತಲಿನ ಅಂಗಡಿ ಮಳಿಗೆಗಳಿಗೆ ತೆರಳಿ ತೆರಿಗೆ ಕಲೆಕ್ಟ್ ಮಾಡಿದ್ದಾರೆ.
ಇದನ್ನೂ ಓದಿ:ಅಂಬಾವಿಲಾಸ ಫೋಟೋ ಹಾಕಿ ಟ್ವಿಟರ್ನಲ್ಲಿ ಇದರ ಮಹತ್ವ ಸಾರುತ್ತಿರುವ ವಿದೇಶಿಗರು
ಈ ಸಂದರ್ಭದಲ್ಲಿ ತೆರಿಗೆ ಹಣ ಪಾವತಿಸದ ಅಂಗಡಿಗಳನ್ನು ಬಂದ್ ಮಾಡುತ್ತಿದ್ದು, ಒಂದೇ ದಿನದಲ್ಲಿ 6 ಲಕ್ಷ ರೂಪಾಯಿ ತೆರಿಗೆ ಸಂಗ್ರಹಿಸಿದ್ದು, ಕೊರೊನಾ ಕಾರಣದಿಂದಾಗಿ ವ್ಯಾಪಾರ ನಡೆಯುತ್ತಿಲ್ಲ ಎಂಬ ಕಾರಣದಿಂದ ಮಾಲೀಕರಿಗೆ ಆಸ್ತಿ ತೆರಿಗೆ ಸಂಗ್ರಹ ಮಾಡಲು ಕಾಲಾವಕಾಶ ನೀಡಲಾಗಿತ್ತು. ಈಗ ಪರಿಸ್ಥಿತಿ ಸುಧಾರಿಸಿದ್ದು, ತೆರಿಗೆ ಹಣ ಸಂಗ್ರಹಿಸಲು ಮುಂದಾಗಿದ್ದೇವೆ ಎನ್ನುತ್ತಾರೆ ಪಾಲಿಕೆ ಆರೋಗ್ಯಾಧಿಕಾರಿ ಡಾ.ಜಯಂತ್.