ಕರ್ನಾಟಕ

karnataka

ETV Bharat / city

ಮೇಕೆದಾಟು ಪಾದಯಾತ್ರೆಗೆ ಹೊರಟ ಮೈಸೂರಿನ ಕಾಂಗ್ರೆಸ್ ಮುಖಂಡರು - ಕಾಂಗ್ರೆಸ್ ಮೇಕೆದಾಟು ಪಾದಯಾತ್ರೆ

ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಭಾಗವಹಿಸಲು ಮೈಸೂರಿನಿಂದ ಕಾಂಗ್ರೆಸ್ ಮುಖಂಡರು ಹಾಗೂ ಎಂಟು ಸಾವಿರ ಕಾರ್ಯಕರ್ತರು ಹೊರಟಿದ್ದಾರೆ.

padayatra
ಮೇಕೆದಾಟು ಪಾದಯಾತ್ರೆಗೆ ಹೊರಟ ಮೈಸೂರಿನ ಕಾಂಗ್ರೆಸ್ ಮುಖಂಡರು

By

Published : Jan 11, 2022, 1:33 PM IST

Updated : Jan 11, 2022, 1:52 PM IST

ಮೈಸೂರು: ಮೇಕೆದಾಟು ಪಾದಯಾತ್ರೆಯಲ್ಲಿ ಪಾಲ್ಗೊಳ್ಳಲು ಮೈಸೂರಿನಿಂದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಇಂದು ಹೊರಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಮೇಕೆದಾಟು ಯೋಜನೆಗಾಗಿ ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆಯಲ್ಲಿ ಮೈಸೂರಿನಿಂದ ಕಾಂಗ್ರೆಸ್ ಮುಖಂಡರು ಹಾಗೂ ಎಂಟು ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದು, ನಗರದ ಗಾಂಧಿ ವೃತ್ತದ ಬಳಿ ಗಿಡಕ್ಕೆ ನೀರನ್ನು ಎರೆಯುವ ಮೂಲಕ ಚಾಲನೆ ನೀಡಲಾಯಿತು.

ಪಾದಯಾತ್ರೆಯ 3ನೇ ದಿನವಾದ ಇಂದು ಸ್ಥಳೀಯ ಹುಣಸೂರು ಕಾಂಗ್ರೆಸ್ ಶಾಸಕ ಹೆಚ್ ಬಿ ಮಂಜುನಾಥ್, ಮಾಜಿ ಚಾಮರಾಜ ಕ್ಷೇತ್ರದ ಕಾಂಗ್ರೆಸ್ ಶಾಸಕ ವಾಸು ನೇತೃತ್ವದಲ್ಲಿ ಕಾರ್ಯಕರ್ತರು ಹೊರಟಿದ್ದಾರೆ.

ಮೇಕೆದಾಟು ಪಾದಯಾತ್ರೆಗೆ ಹೊರಟ ಮೈಸೂರಿನ ಕಾಂಗ್ರೆಸ್ ಮುಖಂಡರು

ಇದನ್ನೂ ಓದಿ: ಚಾಮರಾಜನಗರ: ಪಾದಯಾತ್ರೆಗೆ ಜನರನ್ನು ಕರೆದೊಯ್ದ 13 ಮಂದಿ ವಿರುದ್ಧ ಎಫ್ಐಆರ್!

ಮೈಸೂರು ಜಿಲ್ಲೆಯ ಪ್ರತಿಯೊಂದು ತಾಲೂಕು ಕೇಂದ್ರಗಳಿಂದ ಹಾಗೂ ವಿಧಾನಸಭಾ ಕ್ಷೇತ್ರಗಳಿಂದ ಕಾಂಗ್ರೆಸ್ ಕಾರ್ಯಕರ್ತರು ಬಸ್​​ಗಳ ಮೂಲಕ ಪಾದಯಾತ್ರೆ ನಡೆಯುವ ಸ್ಥಳಕ್ಕೆ ಹೊರಟಿದ್ದು, ಮೈಸೂರು ಜಿಲ್ಲಾ ಕಾಂಗ್ರೆಸ್ ಪರವಾಗಿ ಪಾದಯಾತ್ರೆಯಲ್ಲಿ ಇವರು ಪಾಲ್ಗೊಳ್ಳಲಿದ್ದಾರೆ.

Last Updated : Jan 11, 2022, 1:52 PM IST

ABOUT THE AUTHOR

...view details