ಕರ್ನಾಟಕ

karnataka

ETV Bharat / city

ಮೈಸೂರಿಗೆ ಕೊರೊನಾಘಾತ; ಒಂದೇ ದಿನ ಸಾವಿರಕ್ಕೂ ಹೆಚ್ಚು ಹೊಸ ಕೇಸ್​!

ಹೊಸ ಪ್ರಕರಣಗಳು, ಹಾಗೂ ಸಾವಿನ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್​ ಟೆಸ್ಟ್​ಗಳನ್ನು ನಡೆಸಲಾಗುತ್ತಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

Mysore covid update
ಅಭಿರಾಮ್ ಜಿ.ಶಂಕರ್

By

Published : Aug 25, 2020, 7:51 PM IST

ಮೈಸೂರು: ಜಿಲ್ಲೆಯಲ್ಲಿ ಇಂದು 1,331 ಕೊರೊನಾ ಸೋಂಕಿನ ಹೊಸ ಪ್ರಕರಣಗಳು ವರದಿಯಾಗಿದ್ದು, ಒಂದೇ ದಿನ 16 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ ಪ್ರಕರಣ ಸಾವಿರ ಗಡಿ ದಾಟಿದೆ. ಇನ್ನೊಂದೆಡೆ ದಿನದಿಂದ ದಿನಕ್ಕೆ ಗುಣಮುಖರಾಗುತ್ತಿರುವ ಸಂಖ್ಯೆ ಹೆಚ್ಚಾಗುತ್ತಿದ್ದು, ಇಂದು ಒಂದೇ ದಿನ 469 ಜನ ಗುಣಮುಖರಾಗಿದ್ದಾರೆ.

ಜಿಲ್ಲೆಯಲ್ಲಿ ಈವರೆಗೆ ಒಟ್ಟು 13,929 ಕೋವಿಡ್​ ಪ್ರಕರಣಗಳು ದಾಖಲಾಗಿದ್ದು, ಅದರಲ್ಲಿ 10,011 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಉಳಿದಂತೆ 3,557 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿಯವರೆಗೆ ಒಟ್ಟು 361 ಮಂದಿ ಜಿಲ್ಲೆಯಲ್ಲಿ ಮಾರಕ ಸೋಂಕಿನಿಂದಾಗಿ ಸಾವನ್ನಪ್ಪಿದ್ದಾರೆ.

ಸಾವಿನ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್​ಗಳನ್ನು ಮಾಡಲಾಗುತ್ತಿದೆ.

ABOUT THE AUTHOR

...view details