ಮೈಸೂರು: ಸಾಂಸ್ಕೃತಿ ನಗರಿ ಮೈಸೂರು ಸ್ವಚ್ಛ ನಗರಿ ಎಂಬ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಮಾತ್ರಲ್ಲವದೇ ಅರಮನೆ ನಗರ ವಿದೇಶಿ ಪ್ರವಾಸಿಗರನ್ನು ಆಕರ್ಷಿಸುವ ತಾಣವಾಗಿದ್ದು, ಇದೀಗ ಮೈಸೂರಿನಲ್ಲಿ ನೀರಿನ ಸರಬರಾಜಿನಲ್ಲಿ ಸ್ವಲ್ಪ ಸಮಸ್ಯೆ ಇದೆ. ಈ ಸಮಸ್ಯೆಯನ್ನು ಸರಿಪಡಿಸುವುದಾಗಿ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಮೈಸೂರು ನೀರು ಸರಬರಾಜಿನಲ್ಲಿ ಸ್ವಲ್ಪ ಸಮಸ್ಯೆ ಇದೆ : ಪಾಲಿಕೆ ಆಯುಕ್ತ ಈಟಿವಿ ಭಾರತದ ಜೊತೆ ಮಾತನಾಡಿರುವ ಪಾಲಿಕೆಯ ಆಯುಕ್ತ ಗುರುದತ್ತ ಹೆಗಡೆ, ಮೈಸೂರು ನಗರ ರಾಜ್ಯದಲ್ಲೇ ವೇಗವಾಗಿ ಬೆಳೆಯುತ್ತಿರುವ ನಗರಗಳಲ್ಲಿ ಒಂದಾಗಿದೆ. ನಗರದಲ್ಲಿ ಕುಡಿಯಲು 4 ಕಡೆಗಳಿಂದ ಸಿಹಿ ನೀರು ಬರುತ್ತದೆ ಎಂದು ಹೇಳಿದ್ದಾರೆ.
ಪ್ರಮುಖವಾಗಿ ವಾಣಿವಿಲಾಸ್, ದೇವನೂರು ಕಡೆಯಿಂದಲೂ ಮೈಸೂರಿಗೆ ನೀರು ಬರುತ್ತದೆ. ಇದರ ಜೊತೆಗೆ ಕಬಿನಿ, ಮೇಳಾಪುರ ಕಡೆಯಿಂದಲೂ ನೀರು ಸರಬರಾಜುಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ನೀರು ಸರಬರಾಜಿನಲ್ಲಿ ಸ್ವಲ್ಪ ಸಮಸ್ಯೆಗಳಿದ್ದು, ಟ್ಯಾಂಕರ್‌ಗಳಿಂದ ನೀರು ಪೂರೈಸುವ ಮೂಲಕ ಸಮಸ್ಯೆಯನ್ನು ಹೋಗಲಾಡಿಸುವ ಪ್ರಯತ್ನ ಮಾಡಲಾಗಿದೆ. ಆದರೂ ನಿತ್ಯ ನಗರ ಬೆಳೆಯುತ್ತಿರುವುದರಿಂದ ಸಮಸ್ಯೆಗಳು ಉಂಟಾಗುತ್ತಿದ್ದು ಅದರ ಪರಿಹಾರಕ್ಕೆ ಪಾಲಿಕೆ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ಮಾಹಿತಿ ನೀಡಿದ್ದಾರೆ.