ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಮತ್ತೊಂದು ಪೆಲಿಕಾನ್ ಪಕ್ಷಿ ಮೃತಪಟ್ಟಿದ್ದು, ಈ ರೀತಿಯ ಸರಣಿ ಸಾವು ಪಕ್ಷಿ ಪ್ರಿಯರಲ್ಲಿ ಆತಂಕ ಸೃಷ್ಟಿಸಿದೆ.
ಕುಕ್ಕರಹಳ್ಳಿ ಕೆರೆಯಲ್ಲಿ ಮತ್ತೊಂದು ಪೆಲಿಕಾನ್ ಪಕ್ಷಿ ಸಾವು, ಪರಿಸರ ಪ್ರೇಮಿಗಳ ಆತಂಕ
ಕುಕ್ಕರಹಳ್ಳಿ ಕೆರೆಯಲ್ಲಿ ಮತ್ತೊಂದು ಪೆಲಿಕಾನ್ ಪಕ್ಷಿ ಮೃತ ಪಟ್ಟಿದ್ದು ಪಕ್ಷಿ ಪ್ರಿಯರಲ್ಲಿ ಆತಂಕ ಉಂಟುಮಾಡಿದೆ.
ನಿನ್ನೆ ಸಂಜೆ ಕುಕ್ಕರಳ್ಳಿ ಕೆರೆ ನೀರಲ್ಲಿ ಸ್ಪಾಟ್ ಬಿಲ್ಡ್ ಪೆಲಿಕಾನ್ ಪಕ್ಷಿಯ ಮೃತದೇಹ ತೇಲುತ್ತಿರುವುದನ್ನು ಗಮನಿಸಿದ ವಾಯುವಿಹಾರಿಗಳು ಈ ವಿಚಾರವನ್ನು ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ. ಸ್ಥಳಕ್ಕೆ ಬಂದ ಅಧಿಕಾರಿಗಳು ಮೃತ ಪಕ್ಷಿಯ ಕಳೆಬರವನ್ನು ತೆಗೆದುಕೊಂಡು ಬೆಂಗಳೂರಿನ ಅನಿಮಲ್ ಹೆಲ್ತ್ ಆ್ಯಂಡ್ ವೆಟರ್ನರಿ ಬಯೋಲಾಜಿಕಲ್ ಪ್ರಯೋಗಾಲಯಕ್ಕೆ ಕಳುಹಿಸಿದ್ದಾರೆ. ಒಂದೆರಡು ದಿನಗಳಲ್ಲಿ ವರದಿ ಬರುವ ನಿರೀಕ್ಷೆ ಇದ್ದು, ಈ ಪಕ್ಷಿಗಳ ಸಾವಿಗೆ ನಿಖರ ಕಾರಣ ತಿಳಿಯಲಿದೆ ಎಂದು ಡಿಸಿಎಫ್ ಪ್ರಶಾಂತ್ ಕುಮಾರ್ ತಿಳಿಸಿದ್ದಾರೆ. ಇದು ಕುಕ್ಕರಹಳ್ಳಿ ಕೆರೆಯಲ್ಲಿ ಮೃತಪಟ್ಟ 3ನೇ ಪೆಲಿಕಾನ್ ಪಕ್ಷಿಯಾಗಿದ್ದು, ಪಕ್ಷಿ ಪ್ರಿಯರು ಆತಂಕ ವ್ಯಕ್ತಪಡಿಸಿದ್ದಾರೆ.