ಮೈಸೂರು: ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಇದೀಗ ಅಂತಿಮವಾಗಿ ಸ್ಥಳ ವೀಕ್ಷಣೆ ಮಾಡಿ ವರದಿ ನೀಡುವಂತೆ ಮೈಸೂರು ರೈಲ್ವೆ ಅಧಿಕಾರಿಗಳಿಗೆ ಭಾರತೀಯ ರೈಲ್ವೆ ಸೂಚನೆ ನೀಡಿದೆ.
ಮೈಸೂರು-ಕುಶಾಲನಗರ ರೈಲು ಮಾರ್ಗ: ಸ್ಥಳ ವೀಕ್ಷಣೆಗೆ ಭಾರತೀಯ ರೈಲ್ವೆ ಸೂಚನೆ - ಮೈಸೂರು-ಕುಶಾಲನಗರ ನೂತನ ರೈಲು ಮಾರ್ಗ
2019 ರ ಫೆಬ್ರವರಿ 27 ರಂದು ಮೈಸೂರು-ಕುಶಾಲನಗರ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದ್ದು, ಅಂತಿಮವಾಗಿ ಸ್ಥಳ ವೀಕ್ಷಣೆ ಮಾಡಿ ವರದಿ ನೀಡುವಂತೆ ಮೈಸೂರು ರೈಲ್ವೆ ಅಧಿಕಾರಿಗಳಿಗೆ ಭಾರತೀಯ ರೈಲ್ವೆ ಸೂಚನೆ ನೀಡಿದೆ.

ಮೈಸೂರು ರೈಲು ನಿಲ್ದಾಣ
ಮೈಸೂರು ರೈಲು ನಿಲ್ದಾಣ
1,854.62 ಕೋಟಿ ರೂ. ವೆಚ್ಚದಲ್ಲಿ ಮೈಸೂರು ಹಾಗೂ ಕುಶಾಲನಗರ ನಡುವಿನ 87 ಕಿ.ಮೀ ಉದ್ದದ ರೈಲು ಮಾರ್ಗಕ್ಕೆ 2019 ರ ಫೆಬ್ರವರಿ 27 ರಂದು ಕೇಂದ್ರದ ರೈಲ್ವೆ ಇಲಾಖೆ ಅನುಮತಿ ನೀಡಿತ್ತು. ಇದೀಗ ಎರಡು ನಗರಗಳ ನಡುವಿನ ರೈಲು ಸಂಚಾರ ಆರಂಭಕ್ಕೆ ಕೊನೆಯ ಹಂತದಲ್ಲಿ ಸ್ಥಳ ಪರಿಶೀಲನೆ ಮಾಡುವಂತೆ ಸೂಚನೆ ನೀಡಿದ್ದು, ರೈಲು ಮಾರ್ಗಕ್ಕೆ ಅಗತ್ಯವಿರುವ ಸಾಧಕ-ಬಾಧಕಗಳನ್ನು ಈ ಕೊನೆಯ ಹಂತದ ಸರ್ವೇಯಲ್ಲಿ ತಿಳಿಯಬಹುದಾಗಿದೆ.
ಈಗಾಗಲೇ ಮೈಸೂರಿನಲ್ಲಿ ವಿಮಾನ ಸಂಚಾರ, ರಸ್ತೆ ಸಂಚಾರ ಹಾಗೂ ರೈಲು ಸಂಚಾರದಲ್ಲಿ ಗಣನೀಯ ಅಭಿವೃದ್ಧಿಯಾಗುತ್ತಿದೆ.