ಮೈಸೂರು: ಮೈಸೂರು ವಿವಿ ಉತ್ತರ ಪತ್ರಿಕೆ ಸೋರಿಕೆ ಹಗರಣದಲ್ಲಿ ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆ, ಮಂಡಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಹಾಗೂ ಇತರ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಏಪ್ರಿಲ್ 15 ಮತ್ತು 17 ರಂದು ನಡೆದ ಪದವಿ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು, ವಿವಿ ಹಂಗಾಮಿ ನೌಕರರು ಹಾಗೂ ಒಬ್ಬ ಗುಮಾಸ್ತ ಕಳ್ಳತನ ಮಾಡಿ ಏಪ್ರಿಲ್-21 ರಂದು ಲಾಡ್ಜ್ ನಲ್ಲಿ ಬದಲಾವಣೆ ಮಾಡುತ್ತಿರುವ ಸಂದರ್ಭ ಮಂಡಿ ಠಾಣೆಯ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ನೇತೃತ್ವದಲ್ಲಿ ದಾಳಿ ಮಾಡಿದ್ದಾರೆ.
ಮೈಸೂರು ವಿವಿ ಉತ್ತರ ಪತ್ರಿಕೆ ಸೋರಿಕೆ ಹಗರಣ ಓದಿ: ಮೈಸೂರು ವಿವಿ ಉತ್ತರ ಪತ್ರಿಕೆ ಸೋರಿಕೆ ಹಗರಣ: ಇನ್ಸ್ಪೆಕ್ಟರ್ ಸೇರಿ 6 ಮಂದಿ ವಿರುದ್ಧ ಎಫ್ಐಆರ್
ಆ ನಂತರ ಲಂಚ ಪಡೆದು ಪ್ರಕರಣವನ್ನು ದಾಖಲು ಮಾಡದೇ, ಯಾವುದೇ ರೀತಿ ಕ್ರಮ ಜರುಗಿಸದೇ ಸುಮ್ಮನಿದ್ದರು ಎಂಬ ಆರೋಪ ಮಾಡಿ ಸೋಮಸುಂದರಂ ಎಂಬುವರು ನಗರ ಪೊಲೀಸ್ ಕಮೀಷನರ್ಗೆ ದೂರು ನೀಡಿದ್ದರು.
ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಹಾಗೂ ಈ ಪ್ರಕರಣದ 5 ಜನ ಆರೋಪಿಗಳ ಮೇಲೆ ಅಂದರೆ ಒಟ್ಟು 07 ಜನರ ಮೇಲೆ ಎಫ್ಐಆರ್ ದಾಖಲಿಸಲಾಗಿತ್ತು.
ತನಿಖೆಯನ್ನು ನಿಷ್ಪಕ್ಷಪಾತವಾಗಿ ಮಾಡಲು ಮಂಡಿ ಠಾಣೆಯ ಇನ್ಸ್ಪೆಕ್ಟರ್ ನಾರಾಯಣಸ್ವಾಮಿ ಹಾಗೂ ಆ ದಾಳಿಯಲ್ಲಿ ಪಾಲ್ಗೊಂಡಿದ್ದ ಇತರ ಸಿಬ್ಬಂದಿಯನ್ನು ಅಮಾನತು ಮಾಡಿದ್ದಾರೆ. ಅಲ್ಲದೇ ದಕ್ಷ ಅಧಿಕಾರಿಯಿಂದ ತನಿಖೆ ಮಾಡಿಸಲಾಗುವುದು ಎಂದು ಡಾ.ಚಂದ್ರಗುಪ್ತ ಮಾಧ್ಯಮಗಳಿಗೆ ತಿಳಿಸಿದರು.