ಮೈಸೂರು:ಅರಮನೆ ನಗರಿಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಆಘಾತಕಾರಿ ವಿಚಾರಗಳು ಬೆಳಕಿಗೆ ಬಂದಿವೆ. ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರದ ನಿರ್ಜನ ಪ್ರದೇಶದಲ್ಲಿ ವಿದ್ಯಾರ್ಥಿನಿ ಮತ್ತು ಆಕೆಯ ಸ್ನೇಹಿತ ಖಾಸಗಿ ಕ್ಷಣಗಳನ್ನು ಕಳೆಯುತ್ತಿದ್ದಾಗ ಕಿರಾತಕರು ಮೊಬೈಲ್ನಲ್ಲಿ ರೆಕಾರ್ಡ್ ಮಾಡಿದ್ದಾರೆ ಎನ್ನಲಾಗಿದೆ.
ನಂತರ ವಿಡಿಯೋ ತೋರಿಸಿ, ಮೂರು ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಪ್ರಾಣ ರಕ್ಷಣೆಗಾಗಿ ಹಣ ಕೊಡಲು ಸಂತ್ರಸ್ತೆ ಹಾಗೂ ಆತನ ಸ್ನೇಹಿತ ಒಪ್ಪಿಕೊಂಡಿದ್ದರು. ಆದರೆ, ಮಧ್ಯರಾತ್ರಿ 2 ಗಂಟೆಯಾದರೂ ಹಣ ನೀಡಲು ಸಾಧ್ಯವಾಗದಿದ್ದಾಗ ಸಂತ್ರಸ್ತೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಸ್ನೇಹಿತನ ಮೇಲೆ ಕಲ್ಲಿನಿಂದ ಹಲ್ಲೆ ಮಾಡಿ, ಇಬ್ಬರ ಮೊಬೈಲ್ ಕಿತ್ತುಕೊಂಡು ಪರಾರಿಯಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.