ಮೈಸೂರು: ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆ ಆಗಲಿ, ನಂತರ ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಮೈಸೂರಿನಲ್ಲಿ ನಡೆಸಿದ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದ್ದಾರೆ. ನಗರದ ಲಲಿತ್ ಮಹಲ್ ಹೋಟೆಲ್ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುಂದಿನ ಚುನಾವಣೆಯಲ್ಲಿ ಬಿಜೆಪಿ 150 ಸ್ಥಾನ ಗಳಿಸಲಿದೆ. ಇದಕ್ಕಾಗಿ ಈಗಾಗಲೇ ಪಕ್ಷ ಸಂಘಟನೆಗೆ ರಾಜ್ಯಾದ್ಯಂತ ಮೂರು ತಂಡಗಳಾಗಿ ಪ್ರವಾಸ ಮಾಡಲಾಗುತ್ತಿದೆ ಎಂದರು.
ಸಂತೋಷ್ ಆತ್ಮಹತ್ಯೆ ಪ್ರಕರಣ ತನಿಖೆಯಾಗಲಿ ನಂತರ ಕ್ರಮ: ಕಟೀಲ್ - Santosh Patil Suicide
ಸಂತೋಷ್ ಆತ್ಮಹತ್ಯೆ ಪ್ರಕರಣದ ತನಿಖೆ ನಡೆಯಲಿ, ಆನಂತರ ಕ್ರಮ ಕೈಗೊಳ್ಳಲಾಗುವುದು. ಸ್ವತಃ ಈಶ್ವರಪ್ಪನವರೇ ತನಿಖೆಗೆ ಆಗ್ರಹಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ತನಿಖಾ ವರದಿ ನಂತರ ಕ್ರಮ: ಸಂತೋಷ್ ಆತ್ಮಹತ್ಯೆ ಪ್ರಕರಣ ಬಗ್ಗೆ ಪ್ರತಿಕ್ರಿಯಿಸಿ, ಈ ಘಟನೆಯ ತನಿಖೆ ನಡೆಸುವಂತೆ ಸ್ವತಃ ಈಶ್ವರಪ್ಪನವರು ಆಗ್ರಹಿಸಿದ್ದಾರೆ. ತನಿಖೆ ನಡೆಯಲಿ, ನಂತರ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂಬ ಪ್ರಶ್ನೆ ಈಗ ಬರುವುದಿಲ್ಲ. ತನಿಖಾ ವರದಿ ಬರಲಿ ಆನಂತರ ಕ್ರಮ ಕೈಗೊಳ್ಳಲಾಗುವುದು. ಆದರೆ ಈ ಘಟನೆಯನ್ನು ಕಾಂಗ್ರೆಸ್ ರಾಜಕೀಯವಾಗಿ ಬಳಕೆ ಮಾಡಿಕೊಳ್ಳುತ್ತಿದ್ದು ಸುಳ್ಳು ಅಪಪ್ರಚಾರ ಮಾಡಿ, ಜನರಲ್ಲಿ ಗೊಂದಲ ಸೃಷ್ಟಿ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ನಾಳೆ ರಾಜಭವನಕ್ಕೆ ಕಾಂಗ್ರೆಸ್ ನಾಯಕರ ಭೇಟಿ ; ಸಚಿವ ಸಂಪುಟದಿಂದ ಈಶ್ವರಪ್ಪ ವಜಾಗೆ ಒತ್ತಾಯ