ಮೈಸೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಮೈಸೂರು-ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್‌ನೊಂದಿಗೆ ಯಾವುದೇ ಹೊಂದಾಣಿಕೆ ಇಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ಮೈಸೂರಿನಲ್ಲಿ ತಿಳಿಸಿದ್ದಾರೆ.
ನಗರದಲ್ಲಿನ ಪುರಸಭೆ ಮುಂಭಾಗ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಮೈಸೂರಿನಲ್ಲಿ ಜೆಡಿಎಸ್ ಅಭ್ಯರ್ಥಿ ಇರುವುದರಿಂದ ಹೊಂದಾಣಿಕೆ ಪ್ರಶ್ನೆಯೇ ಬರುವುದಿಲ್ಲ. ಎಲ್ಲಿ ಜೆಡಿಎಸ್ ಅಭ್ಯರ್ಥಿ ಇಲ್ಲ. ಆ ಭಾಗದ ಪ್ರಮುಖರು ಅಲ್ಲಿ ನಿರ್ಧಾರ ತೆಗೆದುಕೊಳ್ಳುತ್ತಾರೆ. ಆದರೆ ಮೈಸೂರು- ಚಾಮರಾಜನಗರ ಜಿಲ್ಲೆಗೆ ಸಂಬಂಧಪಟ್ಟಂತೆ ಯಾವುದೇ ಒಡಂಬಡಿಕೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟನೆ ನೀಡಿದರು.