ಕರ್ನಾಟಕ

karnataka

ETV Bharat / city

ಮೈಸೂರಿನ 48 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ತಗುಲಿದ ಕೊರೊನಾ ಸೋಂಕು!

ಒಂದು ವಾರದ ಅವಧಿಯಲ್ಲಿ ಮೈಸೂರಿನ ಎರಡು ಖಾಸಗಿ ಕಾಲೇಜುಗಳ 48 ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ.

By

Published : Nov 27, 2021, 1:14 PM IST

Corona for mysore nursing students
ಮೈಸೂರು ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ

ಮೈಸೂರು: ಬೆಂಗಳೂರು ಹಾಗೂ ಧಾರವಾಡದ ಕಾಲೇಜು ವಿದ್ಯಾರ್ಥಿಗಳಲ್ಲಿ ಕೋವಿಡ್​​ ದೃಢಪಟ್ಟ ಬೆನ್ನಲ್ಲೇ ಇದೀಗ ಮೈಸೂರಿನ ಕಾಲೇಜು ವಿದ್ಯಾರ್ಥಿಗಳಲ್ಲೂ ಸೋಂಕು ಕಾಣಿಸಿಕೊಳ್ಳುತ್ತಿದೆ. ಒಂದು ವಾರದ ಅವಧಿಯಲ್ಲಿ ಮೈಸೂರಿನ ಎರಡು ಖಾಸಗಿ ಕಾಲೇಜುಗಳ 48 ನರ್ಸಿಂಗ್‌ ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ.

ಜಿಲ್ಲಾಡಳಿತದ ಅಧಿಕಾರಿಗಳು ನೀಡಿರುವ ಮಾಹಿತಿಗಳ ಪ್ರಕಾರ, ಎರಡು ಖಾಸಗಿ ನರ್ಸಿಂಗ್ ಕಾಲೇಜುಗಳ 48 ವಿದ್ಯಾರ್ಥಿಗಳಲ್ಲಿ ಕೋವಿಡ್ ತಗುಲಿರುವುದು​​ ದೃಢಪಟ್ಟಿದೆ. ಈ ಎಲ್ಲ ವಿದ್ಯಾರ್ಥಿಗಳು ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದಾರೆ.

ನರ್ಸಿಂಗ್‌ ವಿದ್ಯಾರ್ಥಿಗಳಿಗೆ ಕೊರೊನಾ: ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್ ಪ್ರತಿಕ್ರಿಯಿಸಿ, ಒಂದು ವಾರದ ಅವಧಿಯಲ್ಲಿ ನರ್ಸಿಂಗ್ ಕಾಲೇಜಿನ 48 ವಿದ್ಯಾರ್ಥಿಗಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಇದು ಕ್ಲಸ್ಟರ್ ಪ್ರಕರಣವಾದ್ದರಿಂದ, ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಇದೀಗ ಯಾವುದೇ ಸಮಸ್ಯೆ ಇಲ್ಲ. ವಿದ್ಯಾರ್ಥಿಗಳನ್ನು ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ಸೋಂಕು ತಗುಲಿರುವ ಎಲ್ಲ ವಿದ್ಯಾರ್ಥಿಗಳು ಎರಡು ಡೋಸ್ ಲಸಿಕೆ ಪಡೆದುಕೊಂಡಿದ್ದು, ಹೆಚ್ಚಿನವರು ಲಕ್ಷಣರಹಿತರಾಗಿದ್ದಾರೆ ಎಂದು ಜಿಲ್ಲಾಸ್ಪತ್ರೆ ಮಾಹಿತಿ ತಿಳಿಸಿವೆ.

ಇದನ್ನೂ ಓದಿ:ಕೋವಿಡ್ ನಿಯಂತ್ರಣ, ಸೋಂಕಿನ ಹೊಸ ತಳಿ ಸಂಬಂಧ ಸಂಜೆ ಸಿಎಂ ಸಭೆ: ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ

ಕೊರೊನಾ ಎರಡನೇ ಅಲೆಯಲ್ಲಿ ಮೈಸೂರು ಸಾಕಷ್ಟು ಸಂಕಷ್ಟವನ್ನು ಅನುಭವಿಸಿದ್ದು, ಇದೀಗ ವಿದ್ಯಾರ್ಥಿಗಳಲ್ಲಿ ಕೊರೊನಾ ಹೆಚ್ಚಾಗುತ್ತಿರುವುದು ವಿದ್ಯಾರ್ಥಿಗಳು ಸೇರಿದಂತೆ ಪೋಷಕರನ್ನು ಆತಂಕಕ್ಕೆ ದೂಡಿದೆ.

ABOUT THE AUTHOR

...view details