ಮೈಸೂರು:ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಒಂದು ಲಕ್ಷ ಮನೆಗಳನ್ನು ನಿರ್ಮಾಣ ಮಾಡಲಾಗುವುದು. ಇದಕ್ಕಾಗಿ ಐದು ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ವಸತಿ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಒಂದು ಲಕ್ಷ ಮನೆ ನಿರ್ಮಾಣ: ವಸತಿ ಸಚಿವ ಸೋಮಣ್ಣ - Mysore latest news
ಪ್ರವಾಹದಿಂದಾಗಿ ಮನೆ ಕಳೆದುಕೊಂಡವರ ನೆರವಿಗೆ ಸರ್ಕಾರ ಧಾವಿಸಿದ್ದು, ಒಂದು ಲಕ್ಷ ಮನೆ ನಿರ್ಮಾಣಕ್ಕಾಗಿ ಐದು ಸಾವಿರ ಕೋಟಿ ವೆಚ್ಚವಾಗಲಿದೆ ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ವಸತಿ ಸಚಿವ ಸೋಮಣ್ಣ
ಮೈಸೂರುನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹತ್ತಾರು ವರ್ಷಗಳಿಂದ ಪ್ರವಾಹ ಪರಿಸ್ಥಿತಿಗೆ ಸಿಲುಕಿರುವ ಗ್ರಾಮಗಳನ್ನು ಬೇರೆಡೆಗೆ ಸ್ಥಳಾಂತರ ಮಾಡಲಾಗುವುದು. ಪ್ರವಾಹ ಪೀಡಿತ ಪ್ರದೇಶಗಳಲ್ಲಿನ ಸಂತ್ರಸ್ತರಿಗಾಗಿ ಇನ್ನು ಮುಂದೆ ಎತ್ತರದ ಸ್ಥಳದಲ್ಲಿ, ಸುರಕ್ಷಿತ ಪ್ರದೇಶಗಳಲ್ಲಿ ಮನೆಗಳನ್ನು ನಿರ್ಮಿಸಲಾಗುವುದು ಎಂದರು.