ಮೈಸೂರು :ಅರಮನೆ ಆವರಣದಲ್ಲಿ ನಡೆಯಲಿರುವ ಜಂಬೂಸವಾರಿ ವೀಕ್ಷಣೆಗೆ ಎರಡು ಸಾವಿರ ಮಂದಿಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್ ಟಿ ಸೋಮಶೇಖರ್ ತಿಳಿಸಿದ್ದಾರೆ.
ಜಂಬೂಸವಾರಿ ವೀಕ್ಷಣೆಗೆ 2 ಸಾವಿರ ಮಂದಿಗೆ ಮಾತ್ರ ಅವಕಾಶ.. ಎಸ್ ಟಿ ಸೋಮಶೇಖರ್ - ಮೈಸೂರು ಸುದ್ದಿ
ಜಂಬೂಸವಾರಿಗೆ ಭಾಗವಹಿಸುವ ಕಲಾವಿದರು 5 ದಿನ ಮುಚಿತವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಂಡು ವರದಿ ತರಬೇಕು. ನೆಗೆಟಿವ್ ಬಂದ ಕಲಾವಿದರಿಗೆ ಅವಕಾಶ ನೀಡಲಾಗುವುದು..
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೊನಾ ಕಾರಣದಿಂದಾಗಿ ಸರಳ ದಸರಾ ಆಚರಿಸಲು ನಿರ್ಧರಿಸಿರುವುದರಿಂದ ಚಾಮುಂಡಿ ಬೆಟ್ಟದಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮಕ್ಕೆ 250, ಅರಮನೆ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ 1 ಸಾವಿರ, ಜಂಬೂ ಸವಾರಿಗೆ 2 ಸಾವಿರ ಜನ ಸೇರಿಸಲು ಚಿಂತನೆ ನಡೆಸಿದ್ದೇವೆ.
ಜಂಬೂಸವಾರಿಗೆ ಭಾಗವಹಿಸುವ ಕಲಾವಿದರು 5 ದಿನ ಮುಚಿತವಾಗಿ ಕೊರೊನಾ ಟೆಸ್ಟ್ ಮಾಡಿಸಿಕೊಂಡು ವರದಿ ತರಬೇಕು. ನೆಗೆಟಿವ್ ಬಂದ ಕಲಾವಿದರಿಗೆ ಅವಕಾಶ ನೀಡಲಾಗುವುದು ಎಂದರು. ದಸರಾವನ್ನು ಪರಂಪರೆಯಾಗಿ ಮುಂದುವರೆಸಿಕೊಂಡು ಬರಲಾಗಿದೆ. ಹೀಗಾಗಿ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕಾಗುತ್ತೆ. ಈ ವಿಚಾರದಲ್ಲಿ ಯಾವುದೇ ರೀತಿಯ ಗೊಂದಲ ಬೇಡ ಎಂದರು.