ಕರ್ನಾಟಕ

karnataka

ETV Bharat / city

ಸಿಎಂ ಬೊಮ್ಮಾಯಿ ಆರ್​​ಎಸ್​​ಎಸ್‌ನವರಲ್ಲ, ಅವರನ್ನು ಬದಲಾಯಿಸ್ತಾರೆ: ಸಿದ್ದರಾಮಯ್ಯ - latest political development in Karnataka

ಅಧಿಕಾರಿಗಳು ಯಾವ ಸಚಿವರ ಮಾತನ್ನೂ ಕೇಳುತ್ತಿಲ್ಲ. ಸಚಿವರುಗಳಿಗೂ ಇದರ ಬಗ್ಗೆ ಜ್ಞಾನವಿಲ್ಲ. ಇಂತಹ ಕೆಟ್ಟ ಸರ್ಕಾರವನ್ನು ಕರ್ನಾಟಕ ಕಂಡಿಲ್ಲ. ಇದೊಂದು ಭ್ರಷ್ಟ ಸರ್ಕಾರ ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

Siddaramaiah
ಸಿದ್ದರಾಮಯ್ಯ

By

Published : May 1, 2022, 1:42 PM IST

ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರ್​​ಎಸ್ಎಸ್‌ನವರಲ್ಲ. ಹೀಗಾಗಿ ಅವರನ್ನು ಬದಲಾಯಿಸಲು ಆರ್​​ಎಸ್ಎಸ್‌ನವರು ಹೊರಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೊಮ್ಮಾಯಿ ಜನತಾ ಪರಿವಾರದವರು. ನಮ್ಮ ಜತೆಯಲ್ಲೇ ಇದ್ದವರು. ಆದರೆ ಅವರು ನಮ್ಮ ಪಟ್ಟುಗಳನ್ನು ಕಲಿಯಲಿಲ್ಲ ಎಂದರು.


ರಾಜ್ಯದಲ್ಲಿ ರಾಜ್ಯ ಸರ್ಕಾರ ಸತ್ತು ಹೋಗಿದೆ. ಸಿಎಂ, ಗೃಹ ಸಚಿವರು ಇಬ್ಬರೂ ಅಶಕ್ತರು. ಗೃಹ ಸಚಿವರು ಅತ್ಯಂತ ಅಸಮರ್ಥ ಸಚಿವ. ರಾಜ್ಯದಲ್ಲಿ ಸರ್ಕಾರವೇ ಇಲ್ಲ. ಇವರಿಗೆ ಆಡಳಿತ ಮಾಡುವುದಕ್ಕೆ ಬರುತ್ತಿಲ್ಲ. ಎಲ್ಲಾ ಪರೀಕ್ಷೆಗಳಲ್ಲೂ ದುಡ್ಡು ದುಡ್ಡು ಎನ್ನುತ್ತಿದ್ದಾರೆ. ದುಡ್ಡು ಕೊಟ್ಟು ಬಂದ ಅಧಿಕಾರಿಗಳು ಇವರ ಮಾತು ಕೇಳುತ್ತಿಲ್ಲ ಎಂದು ಕಿಡಿಕಾರಿದರು.

ರಾಜ್ಯದಲ್ಲಿ ಕಲ್ಲಿದ್ದಲು ಕೊರತೆ ಇಲ್ಲ, ಆದರೆ ಸರ್ಕಾರಕ್ಕೆ ಅದನ್ನು ನಿಭಾಯಿಸಲು ಬರುತ್ತಿಲ್ಲ. ಕಲ್ಲಿದ್ದಲು ಹೆಚ್ಚಾಗಿಯೇ ಇದೆ. ಇಂತಹ ಆಡಳಿತದಿಂದ ರಾಜ್ಯಕ್ಕೆ ಕಷ್ಟ ಎದುರಾಗುತ್ತಿದೆ. ಕೃತಕ ಕೊರತೆ ಸೃಷ್ಟಿ ಮಾಡುತ್ತಿದ್ದಾರೆ. ದಿಢೀರನೆ ಕಲ್ಲಿದ್ದಲು ಉತ್ಪಾದನೆ ನಿಲ್ಲಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದರು.

ಕಾಂಗ್ರೆಸ್‌ನಿಂದ ವಂಶಪಾರಂಪರ್ಯ ರಾಜಕಾರಣ ಎಂದು ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಯಡಿಯೂರಪ್ಪ ಮತ್ತು ಅವರ ಮಕ್ಕಳು ಯಾರು? ಅಪ್ಪ- ಮಕ್ಕಳು ಅಲ್ವಾ?. ಅಂದರೆ ವಂಶಪಾರಂಪರ್ಯ ರಾಜಕಾರಣದ ಬಗ್ಗೆ ಮಾತನಾಡಲು ಇವರಿಗೆ ಯಾವ ನೈತಿಕತೆ ಇದೆ? ಎಂದು ಅವರು ಪ್ರಶ್ನಿಸಿದರು.

ಇದನ್ನೂ ಓದಿ:ನಾನು ಸ್ಟ್ರಾಂಗ್ ಆಗಿ ಆಡಳಿತ ನಡೆಸಿದ್ರೆ ಡಿಕೆಶಿಗೆ ತಡೆದುಕೊಳ್ಳಲು ಸಾಧ್ಯವಿಲ್ಲ: ಸಿಎಂ ತಿರುಗೇಟು

ABOUT THE AUTHOR

...view details