ಮೈಸೂರು:ತೆಂಗಿನಮರದಿಂದ ಬಿದ್ದು ತೀವ್ರವಾಗಿ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯಗೊಂಡಿದ್ದು(brain dead patient), ಕುಟುಂಬಸ್ಥರು ಪುತ್ರನ ಅಂಗಾಗಗಳನ್ನು ದಾನ(organs donation) ಮಾಡಿದ್ದಾರೆ.
ಮಂಡ್ಯ ಜಿಲ್ಲೆಯ ತೂಬಿನಕೆರೆಯ ಹನುಮಂತು ಹಾಗೂ ಪೂರ್ಣಿಮಾ ದಂಪತಿಯ ಪುತ್ರ ಹೇಮಂತ್ ಕುಮಾರ್ (27) ಕಳೆದ ಗುರುವಾರ ತೆಂಗಿನ ಮರದಲ್ಲಿ ಕಾಯಿ ಕೀಳಲು ಹೋಗಿ ಆಯತಪ್ಪಿ ಕೆಳಗೆ ಬಿದ್ದಿದ್ದರು. ತಕ್ಷಣ ಇವರನ್ನು ಮೈಸೂರಿನ ಖಾಸಗಿ ಆಸ್ಪತ್ರೆ(mysore hospital)ಗೆ ದಾಖಲಿಸಲಾಗಿತ್ತು. ವೈದ್ಯರು ಪರೀಕ್ಷೆ ಮಾಡಿದಾಗ ಇವರ ತಲೆಗೆ ತೀವ್ರವಾದ ಪೆಟ್ಟು ಬಿದ್ದಿದ್ದರಿಂದ ಮೆದುಳು ನಿಷ್ಕ್ರಿಯ(brain dead)ಗೊಂಡಿದೆ ಎಂದು ಕುಟುಂಬಸ್ಥರಿಗೆ ತಿಳಿಸಿದರು.