ಕರ್ನಾಟಕ

karnataka

ETV Bharat / city

ಮೈಸೂರಿನಲ್ಲಿ ಇಂದು ಓರ್ವ ಸೋಂಕಿತ ಗುಣಮುಖನಾಗಿ ಡಿಸ್ಚಾರ್ಚ್! - mysore corona pandemic

ಮೈಸೂರು ಜಿಲ್ಲೆಯಲ್ಲಿ ಇಂದು ರೋಗಿ ಸಂಖ್ಯೆ-2,824 ಕೊರೊನಾ ಸೋಂಕಿನಿಂದ ಗುಣಮುಖನಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ.

P-2824 Complete Cure and discharge in Mysore
ಮೈಸೂರಿನಲ್ಲಿ ಪಿ-2824 ಸಂಪೂರ್ಣ ಗುಣಮುಖ..ಆಸ್ಪತ್ರೆಯಿಂದ ಡಿಸ್ಚಾರ್ಚ್

By

Published : Jun 4, 2020, 10:28 PM IST

ಮೈಸೂರು:ಜಿಲ್ಲೆಯ ಕೋವಿಡ್​-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರ ಪೈಕಿ ಓರ್ವ ಕೊರೊನಾ ಸೋಂಕಿತ ಇಂದು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲಾಧಿಕಾರಿಯ ಪ್ರಕಟಣೆ

ರೋಗಿ ಸಂಖ್ಯೆ-2,824 ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖನಾಗಿ ಗುರುವಾರ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.

ಒಟ್ಟಾರೆ 10,367ಮಂದಿಯನ್ನು ಪರೀಕ್ಷಿಸಲಾಗಿದ್ದು, ಇದರಲ್ಲಿ 10,268 ಮಂದಿಯ ವರದಿ ನೆಗೆಟಿವ್ ಎಂದು ಬಂದಿದೆ. ಒಟ್ಟು 99 ಕೊರೊನಾ ಪ್ರಕರಣಗಳ ಪೈಕಿ 6 ಪ್ರಕರಣಗಳು ಮಾತ್ರ ಸಕ್ರಿಯವಾಗಿವೆ.

777 ಮಂದಿ ಹೋಮ್​ ಕ್ವಾರೆಂಟೈನ್ ಮಾಡಲಾಗಿದ್ದು, 140 ಮಂದಿ ಫೆಸಿಲಿಟಿ ಕ್ವಾರೆಂಟೈನ್‌ನಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ABOUT THE AUTHOR

...view details