ಕರ್ನಾಟಕ

karnataka

ETV Bharat / city

ಕೋವಿಡ್ ನಿಯಮ ಗಾಳಿಗೆ ತೂರಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ

ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೆ ಏರುತ್ತಿದ್ದರೂ ಕೂಡ ಮೈಸೂರಿನ ದೇವರಾಜ ಮಾರುಕಟ್ಟೆಯಲ್ಲಿ ಜನರು ಗುಂಪು ಗುಂಪಾಗಿ ಸೇರುವ ಮೂಲಕ ಕೊರೊನಾ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ.

Devaraja Market
ಕೋವಿಡ್ ನಿಯಮ ಗಾಳಿಗೆ ತೂರಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ!

By

Published : May 1, 2021, 11:39 AM IST

ಮೈಸೂರು:ನಗರದ ದೇವರಾಜ ಮಾರುಕಟ್ಟೆಯಲ್ಲಿ ಕೋವಿಡ್​ ನಿಯಮ ಗಾಳಿಗೆ ತೂರಿರುವ ಜನರು, ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದಿದ್ದರು.

ಕೋವಿಡ್ ನಿಯಮ ಗಾಳಿಗೆ ತೂರಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ ಜನತೆ

ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಎಷ್ಟೇ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದರೂ ಉಲ್ಲಂಘಿಸುವವರ ಸಂಖ್ಯೆ ಮಾತ್ರ ಕಡಿಮೆಯಾಗುತ್ತಿಲ್ಲ. ಜನತಾ ಕರ್ಫ್ಯೂ ಹಿನ್ನೆಲೆಯಲ್ಲಿ ಅಗತ್ಯ ವಸ್ತುಗಳ ಖರೀದಿಗಾಗಿ ಬೆಳಗ್ಗೆ 6 ಗಂಟೆಯಿಂದ 10 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಈ ಸಮಯದಲ್ಲಿ ಜನರು ಮಾರುಕಟ್ಟೆಗಳಲ್ಲಿ ಮಾಸ್ಕ್​ ಹಾಕದೆ, ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಅಗತ್ಯ ವಸ್ತುಗಳ ಖರೀದಿಗೆ ಮುಗಿಬೀಳುತ್ತಿದ್ದಾರೆ.

ರಸ್ತೆ ತುಂಬೆಲ್ಲಾ ಬೈಕ್​, ಆಟೋ ಹಾಗೂ ಕಾರುಗಳ ಓಡಾಟ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಟ್ಟಿನಲ್ಲಿ ಸರ್ಕಾರದ ಟಫ್ ರೂಲ್ಸ್, ದಂಡಕ್ಕೂ ಬಗ್ಗದ ಜನರು ಕೊರೊನಾ ನಿಯಮಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ.

ಓದಿ:ಸದ್ದಿಲ್ಲದಂತೆ ಸಾಂತ್ವನ ಕೇಂದ್ರಗಳಿಗೆ ಸಿಎಂ ಬೀಗ ಜಡಿಸಿದ್ದಾರೆ: ಹೆಚ್​ಡಿಕೆ

ABOUT THE AUTHOR

...view details