ಮೈಸೂರು: ಪಿಎಚ್ಡಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸರಸ್ವತಿಪುರಂನಲ್ಲಿ ನಡೆದಿದೆ. ರಶ್ಮಿ (29) ಮೃತರು. ಚಾಮರಾಜನಗರ ಮೂಲದ ರಶ್ಮಿ ಸರಸ್ವತಿಪುರಂ 9ನೇ ಮೇನ್ನಲ್ಲಿರುವ ಪಿಜಿಯಲ್ಲಿ ಉಳಿದುಕೊಂಡಿದ್ದರು.
ಮೈಸೂರಿನಲ್ಲಿ ಪಿಎಚ್ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು - ಸರಸ್ವತಿಪುರಂ ಪಿಎಚ್ಡಿ ವಿದ್ಯಾರ್ಥಿನಿ ಸಾವು ಪ್ರಕಣ
ಮೈಸೂರು ವಿವಿಯ ಪಿಎಚ್ಡಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪಿಎಚ್ಡಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಎಂಎಸ್ಸಿ ಕೆಮಿಸ್ಟ್ರಿ ಮುಗಿಸಿ ಮೈಸೂರು ವಿವಿಯಲ್ಲಿ ಪಿಎಚ್ಡಿ ಮಾಡುತ್ತಿದ್ದರು. ಜೆಎಸ್ಎಸ್ ಕಾಲೇಜಿನಲ್ಲಿ ಪಾರ್ಟ್ ಟೈಂ ಲೆಕ್ಚರರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕೆಮಿಸ್ಟ್ರಿ ವಿಷಯದಲ್ಲಿ ಪಿಎಚ್ಡಿ ಮಾಡುತ್ತಿದ್ದ ಇವರು ಸಂಶೋಧನೆಗೆ ಬೇಕಾದ ದಾಖಲಾತಿಗಳನ್ನು ಸಂಗ್ರಹಿಸಿ ಪ್ರಬಂಧ ಮಂಡಿಸುವ ವಿಚಾರದಲ್ಲಿ ಸಿದ್ಧತೆ ಮಾಡಿಕೊಂಡಿರಲಿಲ್ಲವೆಂದು ಹೇಳಲಾಗಿದೆ. ಇದರಿಂದ ಒತ್ತಡಕ್ಕೊಳಗಾಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗಿದೆ.
ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Nov 6, 2021, 6:06 PM IST