ಮೈಸೂರು: ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಕ್ಲಾಸ್ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೇ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಮೈಸೂರಿನಿಂದ ಏಕೈಕ ವಿದ್ಯಾರ್ಥಿಯಾಗಿ ಭಾಗವಹಿಸಿದ್ದ ಜಿಲ್ಲೆಯ ದೊಡ್ಡ ಮಾರನಗೌಡನಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 11ನೇ ತರಗತಿಯ ವಿದ್ಯಾರ್ಥಿ ಎಂ.ಬಿ. ತರುಣ್ ಅವರು ಶುಕ್ರವಾರ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಆನ್‌ಲೈನ್ ಪಾಠದಲ್ಲಿ ವಿದ್ಯಾರ್ಥಿಗಳಿಗೆ ಆಗುತ್ತಿರುವ ತೊಡಕುಗಳ ಬಗ್ಗೆ ಪ್ರಶ್ನಿಸಿದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಉತ್ತರಿಸಿದರು. ಮಕ್ಕಳು ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡು ಪಾಠ ಕಲಿಯಬೇಕು. ಆನ್‌ಲೈನ್ ಅಥವಾ ಆಫ್‌ಲೈನ್ ಯಾವುದೇ ಇದ್ದರೂ ಮನಸನ್ನು ಹಿಡಿತದಲ್ಲಿ ಇಟ್ಟುಕೊಂಡಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್ ಮೂಲಕ ಮಕ್ಕಳ ಜೊತೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಸಲಹೆ ನೀಡಿದರು.