ಮೈಸೂರು: ಪ್ರಸ್ತುತ ದಿನಗಳಲ್ಲಿ ವಿದ್ಯುತ್ ಕಡಿತಗೊಂಡರೂ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲಾಗಿರುತ್ತದೆ. ಆದರೆ, ನಂಜನಗೂಡು ನಗರಸಭೆ ಕಚೇರಿಯಲ್ಲಿ ವಿದ್ಯುತ್ಗೆ ಯಾವುದೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳದ ಕಾರಣ ವಿದ್ಯುತ್ ಕಡಿತಗೊಂಡ(power cut) ವೇಳೆ ಮಬ್ಬುಗತ್ತಲಲ್ಲಿ ಕಾರ್ಯ ನಿರ್ವಹಿಸುವ ಸ್ಥಿತಿ ನಿರ್ಮಾಣವಾಗಿದೆ.
ನಿರಂತರ ಮಳೆ(rain) ಹಿನ್ನೆಲೆ ಆಗಾಗ ವಿದ್ಯುತ್ ಕಡಿತಗೊಳ್ಳುತ್ತಿದೆ. ಕಳೆದ ಎರಡು ತಿಂಗಳಿನಿಂದ ನಂಜನಗೂಡು(nanjangud) ನಗರಸಭೆ ಕಚೇರಿ ಸಿಬ್ಬಂದಿ ಪರದಾಡುವಂತಾಗಿದೆ.
ವಿದ್ಯುತ್ ಕಡಿತಗೊಂಡಾಗ ಪರ್ಯಾಯವಾಗಿ ಉಪಯೋಗಿಸುವ ಯುಪಿಎಸ್ ಅಥವಾ ಜನರೇಟರ್ ಸೇರಿ ಯಾವುದೇ ವ್ಯವಸ್ಥೆಗಳನ್ನು ನಗರ ಸಭೆ ಕಚೇರಿ ಹೊಂದಿಲ್ಲದ ಕಾರಣ ಇಲ್ಲಿನ ಸಿಬ್ಬಂದಿ ಕತ್ತಲಿನಲ್ಲೇ ಕರ್ತವ್ಯ ನಿರ್ವಹಿಸುತ್ತಾರೆ.
ಸಾರ್ವಜನಿಕ ಕೆಲಸಗಳಿಗೂ ಬ್ರೇಕ್ :ವಿದ್ಯುತ್ ಇದ್ದರೆ ಮಾತ್ರ ಸರ್ಕಾರಿ ಕಚೇರಿಗಳಲ್ಲಿನ ಕೆಲಸಗಳು ಸುಸೂತ್ರವಾಗಿ ನಡೆಯುತ್ತವೆ. ಆದ್ರೆ, ವಿದ್ಯುತ್ ಕೈಕೊಟ್ಟರೆ ಸಾರ್ವಜನಿಕರ ಕೆಲಸ ಕಾರ್ಯಗಳ ಮೇಲೂ ಪರಿಣಾಮ ಬೀರುತ್ತದೆ. ನಗರದಲ್ಲಿ 31 ವಾರ್ಡ್ಗಳಿದ್ದು, 1 ಲಕ್ಷಕ್ಕೂ ಹೆಚ್ಚಿನ ಮತದಾರರಿದ್ದಾರೆ.