ಮೈಸೂರು:ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಂಜನಗೂಡು ತಾಲೂಕಿನ ನಂಜುಂಡೇಶ್ವರ ಹಾಗೂ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ದೇವಿ ಚಾಮುಂಡೇಶ್ವರಿದರ್ಶನ ಪಡೆದು ಪುಳಕಿತರಾದರು.
ಚಾಮುಂಡಿ, ನಂಜುಂಡೇಶ್ವರನ ದರ್ಶನ ಪಡೆದ ರಾಷ್ಟ್ರಪತಿ ರಾಮನಾಥ್ ಕೋವಿಂದ್ - ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ
ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ನಂಜನಗೂಡಿನ ನಂಜುಂಡೇಶ್ವರ ಹಾಗೂ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ಶ್ರೀ ದೇವಿ ಚಾಮುಂಡೇಶ್ವರಿ ದರ್ಶನ ಪಡೆದರು.
president-ramnath-kovind-visit-the-chamundi-temple
ಜಯಚಾಮರಾಜ ಒಡೆಯರ್ ಅವರ ಜನ್ಮ ಶತಮಾನೋತ್ಸವ ಸಮಾರಂಭದಲ್ಲಿ ಭಾಗಿಯಾಗಲು ಗುರುವಾರ ಸಂಜೆ ಆಗಮಿಸಿದ ಕೋವಿಂದ್ ಅವರು ಶುಕ್ರವಾರ ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿದರು.
ರಾಷ್ಟ್ರಪತಿ ಆಗಮಿಸಿದ ಹಿನ್ನೆಲೆಯಲ್ಲಿ ಎರಡೂ ದೇವಸ್ಥಾನಗಳಿಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿತ್ತು. ಪರಿಣಾಮ ಭಕ್ತಾದಿಗಳು ಗಂಟೆಗಟ್ಟಲೇ ದೇವಸ್ಥಾನದ ಹೊರಗೇ ನಿಲ್ಲುವಂತಾಯಿತು. ನಂಜನಗೂಡಿನಲ್ಲಿ ನಂಜುಂಡೇಶ್ವರ ದೇವಸ್ಥಾನದ ಹೊರಭಾಗದಲ್ಲಿ ಸಂಚಾರ ದಟ್ಟಣೆ ಉಂಟಾಗಿ ವಾಹನ ಸವಾರರು ಪರದಾಡಿದರು. ಇದರಿಂದ ಬೇಸತ್ತ ಸವಾರರು ಪರ್ಯಾಯ ಮಾರ್ಗಗಳ ಮೂಲಕ ತಮ್ಮ ಮನೆ ತಲುಪಿದರು.