ಕರ್ನಾಟಕ

karnataka

ETV Bharat / city

ಪೌರತ್ವ ಕಾಯ್ದೆ ಬಗ್ಗೆ ತಿಳಿಸಲು ಪ್ರಧಾನಿ ಸರ್ವಪಕ್ಷ ಸಭೆ ಕರೆಯಬೇಕು: ಹೆಚ್.ವಿಶ್ವನಾಥ್​​ - mysore news

ಪೌರತ್ವ ಕಾಯ್ದೆ ಬಗ್ಗೆ ತಿಳಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಸಿಎಂಗಳನ್ನು ಕರೆದು ಸಭೆ ನಡೆಸಿ, ಅವರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದ್ದಾರೆ.

prime-minister-should-convene-an-all-party-meeting-to-address-the-citizenship-act-hvishwanath
ಪೌರತ್ವ ಕಾಯ್ದೆ ಬಗ್ಗೆ ತಿಳಿಸಲು ಪ್ರಧಾನಿ ಸರ್ವಪಕ್ಷ ಸಭೆ ಕರೆಯಬೇಕು: ಹೆಚ್.ವಿಶ್ವನಾಥ್

By

Published : Dec 26, 2019, 8:07 PM IST

ಮೈಸೂರು: ಪೌರತ್ವ ಕಾಯ್ದೆ ಬಗ್ಗೆ ತಿಳಿಸಲು ಪ್ರಧಾನಿ ನರೇಂದ್ರ ಮೋದಿ ಎಲ್ಲಾ ರಾಜ್ಯಗಳ ಸಿಎಂಗಳನ್ನು ಕರೆದು ಸಭೆ ನಡೆಸಿ, ಅವರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕೆಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದ್ದಾರೆ.

ಪೌರತ್ವ ಕಾಯ್ದೆ ಬಗ್ಗೆ ತಿಳಿಸಲು ಪ್ರಧಾನಿ ಸರ್ವಪಕ್ಷ ಸಭೆ ಕರೆಯಬೇಕು: ಹೆಚ್.ವಿಶ್ವನಾಥ್

ಇಂದು ಮೈಸೂರು ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯಗಳಲ್ಲಿ ಪೌರತ್ವ ಕಾಯ್ದೆಯ ಬಗ್ಗೆ ಪ್ರತಿಭಟನೆ ನಡೆಯುತ್ತಿರುವುದು ಸರಿಯಲ್ಲ. ಈ ಬಗ್ಗೆ ದೇಶದ ಕೆಲವು ರಾಜ್ಯಗಳಲ್ಲಿ ಈ ಪ್ರತಿಭಟನೆ ನಡೆಯುತ್ತಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸರ್ವಪಕ್ಷಗಳನ್ನು ಕರೆದು ಈ ಕಾಯ್ದೆ ಬಗ್ಗೆ ಚರ್ಚಿಸಬೇಕು. ಇದರಿಂದಾಗುವ ಅನುಕೂಲಗಳ ಬಗ್ಗೆ ರಾಜ್ಯದ ಸಿಎಂಗಳಿಗೆ ತಿಳಿಸಿ, ಅವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದರು.

ಇನ್ನು, ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಯನ್ನು ಯಾರು ವೋಟ್ ಬ್ಯಾಂಕ್ ಮಾಡುತ್ತಿದ್ದಾರೆ ಎಂಬುದು ಗೊತ್ತಾಗುತ್ತಿಲ್ಲ. ಈ ಕಾಯ್ದೆ ಏಕೆ ತರುತ್ತಿದ್ದಾರೆ ಎಂದು ಚರ್ಚೆ ಆಗುವುದಿಲ್ಲ. ಆದರೆ ಪ್ರತಿಭಟನೆಗಳು ಆಗುತ್ತಿವೆ. ಈ ಬಗ್ಗೆ ಲೋಕಸಭೆಯಲ್ಲಿ ಚರ್ಚೆ ನಡೆಯುವಾಗ ಕಾಂಗ್ರೆಸ್ ಅಧಿನಾಯಕಿ ಹಾಗೂ ರಾಹುಲ್ ಗಾಂಧಿ ಈ ಚರ್ಚೆಯಲ್ಲಿ ಭಾಗವಹಿಸಿಲ್ಲ. ರಾಜ್ಯ ಸಭೆಯಲ್ಲಿ ಗುಲಾಬ್ ನಬಿ ಅಜಾದ್ ಹಾಗೂ ಕಪಿಲ್ ಸಿಬಲ್ ಚರ್ಚೆಯಲ್ಲಿ ಭಾಗವಹಿಸಿದ್ದರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಗೆ 1979ರಲ್ಲಿ ಪೌರತ್ವ ಸಿಕ್ಕಿದ್ದು, ಇದನ್ನು ದಯಮಾಡಿ ದೊಡ್ಡ ದೊಡ್ಡ ನಾಯಕರು ಗಮನಿಸಬೇಕು. ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆಗಳನ್ನು ಟೀಕಿಸಿದ ಇವರು, ದೇಶದ ಭದ್ರತೆಗಾಗಿ ಪೌರತ್ವ ಕಾಯ್ದೆಯನ್ನು ಒಪ್ಪಿಕೊಳ್ಳಬೇಕು ಎಂದರು.

ABOUT THE AUTHOR

...view details