ಮೈಸೂರು: ಖಾಸಗಿ ಆಸ್ಪತ್ರೆಯ ದತ್ತಾಂಶವಿರುವ ಕಂಪ್ಯೂಟರ್ ಅನ್ನು ಸೈಬರ್ ಕಳ್ಳರು ಹ್ಯಾಕ್ ಮಾಡಿದ್ದಾರೆ. ಬಿಟ್ ಕಾಯಿನ್ ರೂಪದಲ್ಲಿ ಹಣ ನೀಡುವಂತೆ ಬೇಡಿಕೆ ಇಟ್ಟಿರುವಂತಹ ಪ್ರಕರಣ ಮೈಸೂರಿನಲ್ಲಿ ನಡೆದಿದೆ.
ಈ ಬಗ್ಗೆ ದೂರು ದಾಖಲಾಗಿದೆ. ತನಿಖೆಗೆ ನಗರ ಪೊಲೀಸ್ ಕಮಿಷನರ್ ಆದೇಶ ನೀಡಿದ್ದಾರೆ. ಮೈಸೂರು ನಗರದ ಖಾಸಗಿ ಆಸ್ಪತ್ರೆಯ ಮಾಲೀಕರು ನೀಡಿದ ದೂರಿನ ಅನ್ವಯ ನಗರದ ಸೈಬರ್ ಹಾಗೂ ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದೆ ಖಾಸಗಿ ಆಸ್ಪತ್ರೆಯ ಕಂಪ್ಯೂಟರ್ಗಳು ಸರಿಯಾಗಿ ಕಾರ್ಯ ನಿರ್ವಹಿಸುತ್ತಿರಲಿಲ್ಲ. ತಾಂತ್ರಿಕ ದೋಷ ಇರಬಹುದೆಂದು ಆಸ್ಪತ್ರೆ ಸಿಬ್ಬಂದಿ ತಲೆ ಕೆಡಿಸಿಕೊಂಡಿರಲಿಲ್ಲ. ಆದರೆ, ಕೆಲ ಸಮಯದ ಬಳಿಕ ಹ್ಯಾಕರ್ಗಳು ಆಸ್ಪತ್ರೆಯವರಿಗೆ ಸಂದೇಶ ಕಳುಹಿಸಿದ್ದರು.