ಕರ್ನಾಟಕ

karnataka

ETV Bharat / city

ಹಿಜಾಬ್ ಪರ, ವಿರೋಧ ಪ್ರತಿಭಟನೆಗಳಿಗೆ ಅನುಮತಿ ಇಲ್ಲ, ಮೀರಿದ್ರೆ 144 ಸೆಕ್ಷನ್​: ನಗರ ಪೋಲಿಸ್ ಆಯುಕ್ತ - ಮೈಸೂರಿನಲ್ಲಿ ಹಿಜಾಬ್ ಪರ ಹಾಗೂ ವಿರೋಧ ಪ್ರತಿಭಟನೆಗಳಿಗೆ ಅನುಮತಿ ಇಲ್ಲ

ಹಿಜಾಬ್ ಪರ ಹಾಗೂ ವಿರೋಧ ಪ್ರತಿಭಟನೆಗಳಿಗೆ ಅನುಮತಿ ಇಲ್ಲ ಎಂದು ಮೈಸೂರು ನಗರ ಪೋಲಿಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.

Pro-Hijab and opposition protests are not allowed in Mysore, Mysore City police commissioner news, Mysore hijab news, ಹಿಜಾಬ್ ಪರ ಹಾಗೂ ವಿರೋಧ ಪ್ರತಿಭಟನೆಗಳಿಗೆ ಅನುಮತಿ ಇಲ್ಲ, ಮೈಸೂರಿನಲ್ಲಿ ಹಿಜಾಬ್ ಪರ ಹಾಗೂ ವಿರೋಧ ಪ್ರತಿಭಟನೆಗಳಿಗೆ ಅನುಮತಿ ಇಲ್ಲ, ಮೈಸೂರು ಹಿಜಾಬ್​ ಸುದ್ದಿ,
ನಗರ ಪೋಲಿಸ್ ಆಯುಕ್ತ

By

Published : Feb 10, 2022, 3:07 PM IST

ಮೈಸೂರು:ಹಿಜಾಬ್ ವಿವಾದದ ವಿಚಾರವಾಗಿ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿರುವುದರಿಂದ ಹಿಜಾಬ್ ಪರ ಹಾಗೂ ವಿರೋಧ ಪ್ರತಿಭಟನೆಗಳಿಗೆ ಅನುಮತಿ ನೀಡುವುದಿಲ್ಲ ಎಂದು ಮೈಸೂರು ನಗರ ಪೋಲಿಸ್ ಆಯುಕ್ತರಾದ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.

ರಾಜ್ಯದಲ್ಲಿ ಹಿಜಾಬ್ ವಿವಾದ ಹಲವಾರು ಜಿಲ್ಲೆಗಳಲ್ಲಿ ಘರ್ಷಣೆಯನ್ನು ಉಂಟುಮಾಡಿದೆ. ಹಲವಾರು ಕಡೆಗಳಲ್ಲಿ ಕಲ್ಲು ತೂರಾಟಗಳು ನಡೆದಿದ್ದು, ಶಾಂತಿ ಕದಡುವಂತಹ ಸನ್ನಿವೇಶಗಳು ಸೃಷ್ಟಿಯಾಗಿದ್ದು. ಈ‌ ಹಿನ್ನೆಲೆ ರಾಜ್ಯಾದ್ಯಂತ ಮೂರು ದಿನಗಳ ಕಾಲ ರಜೆ ನೀಡಿದ್ದಾರೆ. ಹೀಗಿದ್ದರೂ ರಾಜ್ಯದಲ್ಲಿ ಹಲವು ಕಡೆ ಬಿಗುವಿನ ವಾತಾವರಣ ಮುಂದುವರೆದಿದೆ ಎಂದರು.

ಓದಿ:ಹಿಜಾಬ್ ವಿವಾದ: ಶಾಲಾ, ಕಾಲೇಜು ರಜೆ ವಿಸ್ತರಣೆ ಬಗ್ಗೆ ಸಂಜೆ ಸಭೆಯಲ್ಲಿ ತೀರ್ಮಾನ- ಸಿಎಂ

ಬಿಗುವಿನ ವಾತಾವರಣ ಹಿನ್ನೆಲೆ ಮೈಸೂರಿನಲ್ಲಿ ಶಾಂತಿ ಕಾಪಾಡುವ ಸಲುವಾಗಿ ಹಿಜಾಬ್ ಪರವಾಗಲಿ ಅಥವಾ ವಿರೋಧಿಸಿ ಪ್ರತಿಭಟನೆ ನಡೆಸುವುದಕ್ಕೆ ಅವಕಾಶ ನೀಡುವುದಿಲ್ಲ ಎಂದು ಮೈಸೂರು ನಗರ ಪೋಲಿಸ್ ಆಯುಕ್ತರಾದ ಡಾ. ಚಂದ್ರಗುಪ್ತ ತಿಳಿಸಿದ್ದಾರೆ.

ಪ್ರತಿಭಟನೆ ನಡೆಸಲು ಅನುಮತಿ ಕೋರಲು ಜಿಲ್ಲಾಧಿಕಾರಿ ಕಚೇರಿಗೆ, ಆಯುಕ್ತರ ಕಚೇರಿಗೆ ಬರುವುದು, ಹಠಾತ್ತನೆ ಪ್ರತಿಭಟನೆ ನಡೆಸುವುದು, ಗುಂಪು ಸೇರುವುದು ಕಂಡುಬಂದಲ್ಲಿ ಅವರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಳ್ಳಲಾಗುವುದು. ಒಂದು ವೇಳೆ ಕಾನೂನು ಮೀರಿ ಪ್ರತಿಭಟನೆ ನಡೆಸಿ ಸಮಾಜದ ಶಾಂತಿ ಕದಡಲು ಪ್ರಯತ್ನಿಸಿದರೆ ಅನಿವಾರ್ಯವಾದರೆ ಮೈಸೂರು ನಗರದಾದ್ಯಂತ ಸೆಕ್ಷನ್ 144 ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ಪೋಲಿಸ್ ಆಯುಕ್ತರು ತಿಳಿಸಿದ್ದಾರೆ.

ABOUT THE AUTHOR

...view details