ಮೈಸೂರು:ಸರ್ಕಾರ ಶೈಕ್ಷಣಿಕ ಸಾಲ ಮನ್ನಾ ಆದೇಶ ಹೊರಡಿಸಬೇಕು ಎಂದು ಒತ್ತಾಯಿಸಿ ಶೈಕ್ಷಣಿಕ ಸಾಲ ಮನ್ನಾ ಹೋರಾಟ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ಕರ್ನಾಟಕದಾದ್ಯಂತ ಹಲವಾರು ವಿದ್ಯಾರ್ಥಿಗಳು ಉನ್ನತ ಶಿಕ್ಷಣಕ್ಕಾಗಿ ಬ್ಯಾಂಕ್ಗಳಲ್ಲಿ ಲಕ್ಷಾಂತರ ರೂ. ಸಾಲ ಮಾಡಿದ್ದಾರೆ. ಕೋವಿಡ್ ಕಾರಣದಿಂದಾಗಿ ಸಾಲ ಮರುಪಾವತಿ ಮಾಡಲು ಸಾಧ್ಯವಾಗಿರುವುದಿಲ್ಲ. ಕೂಡಲೇ ಶೈಕ್ಷಣಿಕ ಸಾಲ ಮನ್ನಾ ಮಾಡುವ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದರು.