ಕರ್ನಾಟಕ

karnataka

ETV Bharat / city

ಟಿಪ್ಪು ಅಧ್ಯಾಯ ಪಠ್ಯದಿಂದ ಕೈಬಿಡುವ ಚಿಂತನೆ: ಸರ್ಕಾರದ ವಿರುದ್ಧ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ - Protests of progressive organizations

ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಅಧ್ಯಾಯವನ್ನು ತೆಗೆದುಹಾಕಲು ಚಿಂತನೆ ನಡೆಸಿರುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಟೌನ್​ಹಾಲ್ ಮುಂದೆ ಪ್ರತಿಭಟನೆ ನಡೆಸಲಾಯಿತು.

Protests by progressive organizations against the government
ಟಿಪ್ಪು ಅಧ್ಯಾಯ ಪಠ್ಯದಿಂದ ಕೈಬಿಟ್ಟ ಸರ್ಕಾರದ ವಿರುದ್ದ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

By

Published : Jul 31, 2020, 5:00 PM IST

ಮೈಸೂರು:ಪಠ್ಯಪುಸ್ತಕದಿಂದ ಟಿಪ್ಪು ಸುಲ್ತಾನ್ ಅಧ್ಯಾಯವನ್ನು ತೆಗೆದುಹಾಕಲು ರಾಜ್ಯ ಸರ್ಕಾರದ ಮುಂದಾಗಿದೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದಿಂದ ಟೌನ್​ಹಾಲ್ ಮುಂದೆ ಪ್ರತಿಭಟನೆ ನಡೆಸಲಾಯಿತು.

ಟಿಪ್ಪು ಅಧ್ಯಾಯ ಪಠ್ಯದಿಂದ ಕೈಬಿಡುವ ಚಿಂತನೆ: ಸರ್ಕಾರದ ವಿರುದ್ಧ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ

ನಗರದ ಟೌನ್​ಹಾಲ್​ನ ಡಾ.ಬಿ.ಆರ್. ಅಂಬೇಡ್ಕರ್ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಸರ್ಕಾರ ಟಿಪ್ಪು ಇತಿಹಾಸವನ್ನು ಪಠ್ಯಪುಸ್ತಕದಿಂದ ತೆಗೆದುಹಾಕುವ ನಿರ್ಧಾರ ಮಾಡಿದೆ. ಇದನ್ನು ಕೂಡಲೇ ಕೈಬಿಡಬೇಕು. ಸಂಗೊಳ್ಳಿ ರಾಯಣ್ಣ, ರಾಣಿ ಅಬ್ಬಕ್ಕ , ಟಿಪ್ಪು ಸುಲ್ತಾನ್ ಸಂವಿಧಾನದ ಮೊದಲಾದ ವಿಷಯಕ್ಕೆ ಸಂಬಂಧಿಸಿದ ಪಠ್ಯವನ್ನು ಪಠ್ಯಕ್ರಮದಿಂದ ಕೈಬಿಡಲು ಮುಂದಾಗಿರುವುದು ರ್ದುದೈವದ ಸಂಗತಿ ಎಂದರು.

ಸರ್ಕಾರ ಕೂಡಲೇ ಈ ನಿರ್ಧಾರದಿಂದ ಹಿಂದಕ್ಕೆ ಸರಿಯಬೇಕು. ಇಲ್ಲದಿದ್ದರೆ, ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡುವುದಾಗಿ ಪ್ರಗತಿಪರ ಸಂಘಟನೆಗಳು ಒಕ್ಕೂಟ ಎಚ್ಚರಿಕೆ ನೀಡಿದೆ.

ABOUT THE AUTHOR

...view details