ಮೈಸೂರು: ಕಾಶ್ಮೀರದ ಪುಲ್ವಾಮಾದಲ್ಲಿ ನಡೆದ ಭಯೋತ್ಪಾದನಾ ದಾಳಿಯಿಂದ 44 ಯೋಧರು ಹುತಾತ್ಮರಾದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ಕೇಂದ್ರ ಸರ್ಕಾರ, ದೇಶದ ಎಲ್ಲಾ ರೈಲ್ವೆ ಹಾಗೂ ವಿಮಾನ ನಿಲ್ದಾಣಗಳಲ್ಲಿ ಹೈ ಅಲರ್ಟ್ ಆಗಿರುವಂತೆ ಸೂಚಿಸಿದೆ.
ಪುಲ್ವಾಮಾ ದಾಳಿ ಎಫೆಕ್ಟ್... ರೈಲ್ವೆ, ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್ - ಮೈಸೂರು ರೈಲ್ವೆ ನಿಲ್ದಾಣ
ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ನೀಡಿರುವ ಸೂಚನೆ ಹಿನ್ನೆಲೆಯಲ್ಲಿ, ಮೈಸೂರು ರೈಲ್ವೆ ನಿಲ್ದಾಣ ಹಾಗೂ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ.
ರೈಲ್ವೆ, ವಿಮಾನ ನಿಲ್ದಾಣಗಳಲ್ಲಿ ಹೈಅಲರ್ಟ್
ಕೇಂದ್ರ ಸರ್ಕಾರದ ಗುಪ್ತಚರ ಇಲಾಖೆ ನೀಡಿದ ಸೂಚನೆ ಹಿನ್ನೆಲೆಯಲ್ಲಿ, ಮೈಸೂರು ರೈಲ್ವೆ ನಿಲ್ದಾಣ ಹಾಗೂ ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಬರುವ ವಾಹನಗಳನ್ನು ತಪಾಸಣೆ ಮಾಡಲಾಗುತ್ತಿದೆ. ಅನುಮಾನಾಸ್ಪದ ವ್ಯಕ್ತಿಗಳನ್ನು ಕೂಡಲೇ ವಶಕ್ಕೆ ಪಡೆದು ವಿಚಾರಣೆ ನಡೆಸಲು ಕೂಡ ಪೊಲೀಸರು ಮುಂದಾಗುತ್ತಿದ್ದಾರೆ.
ಇನ್ನು ದಿನದ 24 ಗಂಟೆಯೂ ಶ್ವಾನದಳವನ್ನು ಕರ್ತವ್ಯಕ್ಕೆ ಬಳಸಿಕೊಂಡು ಭಿಗಿಭದ್ರತೆ ಒದಗಿಸಲಾಗುತ್ತಿದೆ.