ಮೈಸೂರು: ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವೆ ಶುರುವಾದ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಮೈಸೂರು ತಾಲ್ಲೂಕು ಜಯಪುರ ಹೋಬಳಿಯ ಕರಡಿಮರಯ್ಯನಹುಂಡಿ ಗ್ರಾಮದಲ್ಲಿ ನಡೆದಿದೆ. ನಂಜುಂಡ (54) ಕೊಲೆಯಾದ ದುರ್ದೈವಿ.
ಆಸ್ತಿ ವಿಚಾರಕ್ಕೆ ದಾಯಾದಿಗಳ ನಡುವಿನ ಕಲಹ ಕೊಲೆಯಲ್ಲಿ ಅಂತ್ಯ - Quarrel between brothers for property
ಅಣ್ಣತಮ್ಮಂದಿರ ನಡುವೆ ಆಸ್ತಿಗಾಗಿ ಶುರುವಾದ ಜಗಳ ಒಬ್ಬನ ಪ್ರಾಣವನ್ನೇ ಕಸಿದುಕೊಂಡಿದೆ.

ಕೊಲೆಯಾದ ನಂಜುಂಡ
ಬುಧವಾರ ಸಂಜೆ ನಡೆದ ಗಲಾಟೆ, ವಿಕೋಪಕ್ಕೆ ತಿರುಗಿ ನಂಜುಂಡ ಅವರಿಗೆ ಶಿವಣ್ಣ ಮತ್ತು ಕೃಷ್ಣ ಎಂಬುವವರು ಚಾಕುವಿನಿಂದ ಇರಿದಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸಲಿಲ್ಲ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಹಾವೇರಿಯಲ್ಲಿ ಗುಂಡು ಹಾರಿಸಿ ಮಹಿಳೆಯ ಹತ್ಯೆ ಯತ್ನ