ಕರ್ನಾಟಕ

karnataka

ETV Bharat / city

ಸಿದ್ದರಾಮಯ್ಯ ವಿರುದ್ಧ ಬಿಜೆಪಿಯವರು ಹುನ್ನಾರ ನಡೆಸುತ್ತಿದ್ದಾರೆ: ಆರ್.ಧ್ರುವನಾರಾಯಣ್ - mysure news

ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಯನ್ನು ತಿರುಚಿ ಬಿಜೆಪಿಯವರು ದಲಿತರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಆರೋಪಿಸಿದ್ದಾರೆ.

R. Dhruvanarayan
ಆರ್.ಧ್ರುವನಾರಾಯಣ್

By

Published : Nov 6, 2021, 12:18 PM IST

ಮೈಸೂರು: ಬಿಜೆಪಿಯವರು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಅಪ ಪ್ರಚಾರ ಮಾಡಿ ದಲಿತರ ದಿಕ್ಕು ತಪ್ಪಿಸುವ ಹುನ್ನಾರ‌ ನಡೆಸುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ್ ಆರೋಪಿಸಿದರು.

ಜಲದರ್ಶಿನಿ ಅತಿಥಿಗೃಹದಲ್ಲಿ ಮಾಧ್ಯಮಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ದಲಿತರ ವಿರುದ್ಧ ಮಾತನಾಡಿದ್ದಾರೆ ಎಂದು ಬಿಜೆಪಿ ಆರೋಪ ಮಾಡುತ್ತಿದೆ. ಸಿಂದಗಿ ಚುನಾವಣೆಯಲ್ಲಿ ಮಾದಿಗ ಜನಾಂಗದ ಸಮ್ಮೇಳನದಲ್ಲಿ ಕೆಲವರು ಅವರ ಸ್ವಾರ್ಥಕ್ಕೆ ಬಿಜೆಪಿ ಸೇರಿದ್ದಾರೆ ಅಂತಾ ಸಿದ್ದರಾಮಯ್ಯ ಹೇಳಿದ್ದರು. ಆದರೆ ಈ ಹೇಳಿಕೆಯನ್ನು ತಿರುಚಿ ಬಿಜೆಪಿಯವರು ದಲಿತರ ದಿಕ್ಕು ತಪ್ಪಿಸುವ ಹುನ್ನಾರ ಮಾಡಿದ್ದಾರೆ. ಅವರು ದುರುದ್ದೇಶದಿಂದ ಈ ರೀತಿ ಹೇಳಿಕೆಯನ್ನು ತಿರುಚಿದ್ದಾರೆ. ಸಿದ್ದರಾಮಯ್ಯ ಮಾಸ್ ಲೀಡರ್, ಜನಪರ‌ ಕಾಳಜಿ ಇರುವ ನಾಯಕ. ಹೀಗಾಗಿ ಅವರ ವಿರುದ್ಧ ಹುನ್ನಾರ ಮಾಡಲಾಗುತ್ತಿದೆ ಎಂದು ದೂರಿದರು.

ಅತಿಥಿಗೃಹದಲ್ಲಿ ಬಿಜೆಪಿ ವಿರುದ್ಧ ಹರಿಹಾಯ್ದ ಆರ್.ಧ್ರುವನಾರಾಯಣ್

ಸಿದ್ದರಾಮಯ್ಯ ಸಿಎಂ ಆಗಿದ್ದಾಗ ದಲಿತರಿಗೆ ಕೊಟ್ಟ ಕಾರ್ಯಕ್ರಮಗಳು, ಯೋಜನೆಗಳು ಹಾಗೂ ಸ್ಥಾನಮಾನವನ್ನು ಇತಿಹಾಸದ ಪುಟದಲ್ಲಿ ದಾಖಲಿಸಿ ಇಡಬಹುದು. ಅಂತವರ ಬಗ್ಗೆ ಮಾತನಾಡುವ ನೈತಿಕತೆ ಬಿಜೆಪಿಯವರಿಗಿಲ್ಲ. ಅಂಬೇಡ್ಕರ್ ಹೆಸರನ್ನು ಬಿಜೆಪಿಯವರು ದುರುಪಯೋಗ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ದಲಿತರ ಮೇಲೆ ಕಾಳಜಿ ಇದ್ದರೆ ದಲಿತರ ಪರವಾದ ಕಾನೂನು ಜಾರಿಗೆ ತನ್ನಿ ಅಂತಾ ಚುನಾವಣೆ ಪ್ರಚಾರದ ವೇಳೆ ಸಿದ್ದರಾಮಯ್ಯ ಮಾತನಾಡಿದ್ದರು. ಆದರೆ ಚುನಾವಣೆ ಮುಗಿದ ನಂತರ ಕೆಲವರು ಈ ವಿಚಾರವಾಗಿ ಪ್ರತಿಭಟನೆ ಮಾಡಿದ್ದಾರೆ. ಇದರಿಂದಾಗಿ ಬಿಜೆಪಿಯವರು ದಲಿತರನ್ನ ಎತ್ತಿ ಕಟ್ಟುವ ಹುನ್ನಾರ ನಡೆಸಿದ್ದಾರೆ ಎಂಬುದು ಸ್ಪಷ್ಟವಾಗಿದೆ ಎಂದರು‌.

ABOUT THE AUTHOR

...view details