ಮೈಸೂರು: ಹುಬ್ಬಳ್ಳಿಯಿಂದ ರೈಲಿನಲ್ಲಿ ಆಗಮಿಸಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮೈಸೂರಿನಲ್ಲಿ ಪೂರ್ಣಕುಂಭ ಸ್ವಾಗತ ನೀಡಲಾಯಿತು.
ಕಾಂಗ್ರೆಸ್ ವಿಭಾಗೀಯ ಮಟ್ಟದ ಸಭೆ: ಮೈಸೂರಿಗೆ ಆಗಮಿಸಿದ ಸುರ್ಜೇವಾಲ, ಡಿ.ಕೆ ಶಿವಕುಮಾರ್ - Congress section level meeting in Mysore
ಇಂದು ಮೈಸೂರಿನಲ್ಲಿ ಕಾಂಗ್ರೆಸ್ ವಿಭಾಗೀಯ ಮಟ್ಟದ ಸಭೆ ಖಾಸಗಿ ಹೋಟೆಲ್ನಲ್ಲಿ ನಡೆಯಲಿದೆ. ಈ ಹಿನ್ನೆಲೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮೈಸೂರಿಗೆ ಬಂದಿಳಿದಿದ್ದಾರೆ.
ಇಂದು ಮೈಸೂರಿನಲ್ಲಿ ಕಾಂಗ್ರೆಸ್ ವಿಭಾಗೀಯ ಮಟ್ಟದ ಸಭೆ ಖಾಸಗಿ ಹೋಟೆಲ್ನಲ್ಲಿ ನಡೆಯಲಿದ್ದು, ಈ ಕಾರ್ಯಕ್ರಮಕ್ಕಾಗಿ ಹುಬ್ಬಳ್ಳಿಯಿಂದ ರಂದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗಮಿಸಿದ್ದಾರೆ. ಈ ವೇಳೆ ಅವರನ್ನು ಮೈಸೂರು ರೈಲ್ವೆ ನಿಲ್ದಾಣದಿಂದ ಕಾಂಗ್ರೆಸ್ ಭವನದವರೆಗೆ ಸಾರೋಟ್ ಮೆರವಣಿಗೆ ಮೂಲಕ ಪೂರ್ಣಕುಂಭ ಸ್ವಾಗತ ನೀಡಿ, ದಾರಿಯುದ್ದಕ್ಕೂ ಪುಷ್ಪಾರ್ಚನೆ ಮಾಡಿ ಅದ್ಧೂರಿಯಾಗಿ ಸ್ವಾಗತಿಸಲಾಯಿತು.
ಹಳೇ ಮೈಸೂರು ಪ್ರಾಂತ್ಯದ ಮೈಸೂರು, ಮಂಡ್ಯ, ಹಾಸನ, ಚಾಮರಾಜನಗರ ಸೇರಿದಂತೆ ಈ ಭಾಗದ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ದೃಷ್ಟಿಯಿಂದ ನಾಯಕರ ಸಭೆಯನ್ನು ಖಾಸಗಿ ಹೋಟೆಲ್ನಲ್ಲಿ ಕರೆಯಲಾಗಿದ್ದು, ಸಭೆಯಲ್ಲಿ ಡಿ.ಕೆ.ಶಿವಕುಮಾರ್, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆ.ಪಿ.ಸಿ.ಸಿ ಕಾರ್ಯಧ್ಯಕ್ಷರು ಸೇರಿದಂತೆ ಸ್ಥಳೀಯ ಶಾಸಕರು, ನಾಲ್ಕು ಜಿಲ್ಲೆಯ ಹಾಲಿ ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ.