ಕರ್ನಾಟಕ

karnataka

ETV Bharat / city

ಮೈಸೂರಲ್ಲಿ ಆಸ್ಪತ್ರೆ ಗ್ರಿಲ್ ಮುರಿದು ಬಂದು ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ! - Mysuru Rape

ಮೈಸೂರಿನ ಕೆ.ಆರ್. ಆಸ್ಪತ್ರೆ ಕಿಟಕಿ ಗ್ರಿಲ್ ಮುರಿದು ಒಳಗೆ ನುಗ್ಗಿದ ಕಾಮುಕನೋರ್ವ, ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರವೆಸಗಿ ಅಮಾನುಷ ಕೃತ್ಯವೆಸಗಿದ್ದಾನೆ‌.

mysuru
ಆಸ್ಪತ್ರೆ ಗ್ರಿಲ್ ಮುರಿದು ಬಂದು ಬುದ್ದಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

By

Published : Jul 10, 2021, 9:45 AM IST

Updated : Jul 10, 2021, 10:03 AM IST

ಮೈಸೂರು: ಜಿಲ್ಲೆಯಲ್ಲಿ ಅಮಾನವೀಯ ಕೃತ್ಯವೊಂದು ನಡೆದಿದೆ. ರಾತ್ರಿ ವೇಳೆ ಕಿಟಕಿಯ ಗ್ರಿಲ್ ಮುರಿದು ಒಳಗೆ ನುಗ್ಗಿದ ಕಾಮುಕನೋರ್ವ, 30 ವರ್ಷದ ಬುದ್ಧಿಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರವೆಸಗಿರುವ ಪೈಶಾಚಿಕ ಘಟನೆ ಕೆ.ಆರ್. ಆಸ್ಪತ್ರೆಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಆಸ್ಪತ್ರೆ ಗ್ರಿಲ್ ಮುರಿದು ಬಂದು ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ

ರಾತ್ರಿ ವೇಳೆ ಕಿಟಕಿ ಮೂಲಕ ಆಸ್ಪತ್ರೆ ಒಳ ನುಗ್ಗುತ್ತಿದ್ದ ಕಾಮುಕನ ಬಗ್ಗೆ ಬುದ್ಧಿಮಾಂದ್ಯ ಮಹಿಳೆಯ ಸಂಬಂಧಿಕರು ಮಾಹಿತಿ ನೀಡಿದರೂ, ವೈದ್ಯರು ಕ್ರಮ ಕೈಗೊಂಡಿಲ್ಲ. ಅಲ್ಲದೇ, ಅತ್ಯಾಚಾರ ಪ್ರಕರಣ ಮುಚ್ಚಿ ಹಾಕಲು ಕೆ‌.ಆರ್. ಆಸ್ಪತ್ರೆ ವೈದ್ಯರು ಯತ್ನಿಸಿದ್ದಾರೆ ಎಂಬ ಗಂಭೀರ ಆರೋಪ ಕೇಳಿಬಂದಿದೆ.

ಮಾನವ ಹಕ್ಕುಗಳ ಸೇವಾ ಸಮಿತಿಯಿಂದ ಈ ಪ್ರಕರಣ ಬೆಳಕಿಗೆ ಬಂದಿದೆ. ಅತ್ಯಾಚಾರದ ಬಗ್ಗೆ ವಾರದ ಹಿಂದೆಯೇ ವೈದ್ಯರಿಗೆ ಮಾಹಿತಿ ನೀಡಿದರೂ, ಮಾಹಿತಿ ನೀಡಿದ ಮಹಿಳೆಗೆ ಹಲ್ಲೆ ಮಾಡಿ ಬಾಯಿ ಬಿಡದಂತೆ ಆಸ್ಪತ್ರೆ ಸಿಬ್ಬಂದಿ ಬೆದರಿಕೆ ಹಾಕಿದ್ದಾರೆ ಎನ್ನಲಾಗ್ತಿದೆ. ಮಾನವ ಹಕ್ಕುಗಳ ಸೇವಾ ಸಮಿತಿ ನೀಡಿದ ಮಾಹಿತಿಯಿಂದ ಪೊಲೀಸರು ಆಸ್ಪತ್ರೆಗೆ ದೌಡಾಯಿಸಿದ್ದಾರೆ.

ವಿಷಯ ಬಹಿರಂಗವಾಗುತ್ತಿದ್ದಂತೆ ಆಸ್ಪತ್ರೆ ಭದ್ರತಾ ಸಿಬ್ಬಂದಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದರೂ ವೈದ್ಯರು ಬಂದಿಲ್ಲ. ನಸ್೯ಗಳು ಜಾಗ ಖಾಲಿ ಮಾಡಿದ್ದಾರೆ ಎಂದು ಹೇಳಲಾಗ್ತಿದೆ. ಅಮಾನವೀಯ ಕೃತ್ಯದ ಬಗ್ಗೆ ತಿಳಿದು ನೆರೆಹೊರೆ ವಾರ್ಡ್​ನ ರೋಗಿಗಳು ಹಾಗೂ ರೋಗಿಗಳನ್ನ ಪೋಷಣೆ ಮಾಡುತ್ತಿರುವವರು ಬೆಚ್ಚಿಬಿದ್ದಿದ್ದಾರೆ.

ಇದನ್ನೂ ಓದಿ:ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ರೌಡಿಶೀಟರ್ಸ್​ಗೆ ಪೊಲೀಸ್​ ಶಾಕ್.. ಪರಪ್ಪನ‌ ಅಗ್ರಹಾರ ಜೈಲಿನ ಮೇಲೂ ದಾಳಿ

Last Updated : Jul 10, 2021, 10:03 AM IST

ABOUT THE AUTHOR

...view details