ಮೈಸೂರು: ಅರಮನೆ ಕೋಟೆ ವಿನಾಯಕ ದೇವಸ್ಥಾನಕ್ಕೆ ಗಣೇಶ ಚತುರ್ಥಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಹಿನ್ನೆಲೆ, ಸಾರ್ವಜನಿಕರ ಪ್ರವೇಶವನ್ನು ರದ್ದು ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಅರಮನೆ ಕೋಟೆ ವಿನಾಯಕ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧ: ಮೈಸೂರು ಡಿಸಿ - ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್
ಗಣೇಶ ಚತುರ್ಥಿ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುವ ಹಿನ್ನೆಲೆ, ಮೈಸೂರು ಅರಮನೆಯ ಕೋಟೆ ವಿನಾಯಕ ದೇವಸ್ಥಾನಕ್ಕೆ ಸಾರ್ವಜನಿಕರ ಪ್ರವೇಶ ರದ್ದು ಪಡಿಸಲಾಗಿದೆ.
ಅರಮನೆ ಕೋಟೆ ವಿನಾಯಕ ದೇವಸ್ಥಾನಕ್ಕೆ ಭಕ್ತರ ಪ್ರವೇಶ ನಿರ್ಬಂಧ
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಹೀಗಾಗಿ ಚಾಮುಂಡೇಶ್ವರಿ ಮತ್ತು ಸಮೂಹ ದೇವಾಲಯದ ಆಡಳಿತ ವ್ಯಾಪ್ತಿಗೆ ಒಳಪಡುವ ಮೈಸೂರು ಅರಮನೆ ಕೋಟೆ ಶ್ರೀ ವಿನಾಯಕ ಸ್ವಾಮಿ ದೇವಾಲಯಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.
ಎಂದಿನಂತೆ ದೇವಾಲಯದ ಒಳಭಾಗದಲ್ಲಿ ಅರ್ಚಕರು ಪೂಜಾ ಕೈಂಕರ್ಯಗಳನ್ನು ನಡೆಸುತ್ತಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.