ಮೈಸೂರು: ಎರಡು ಬಾರಿ ಮೇಯರ್ ಸ್ಥಾನ ಕೈ ತಪ್ಪಿದೆ. ಆದರೆ, ಈ ಬಾರಿ ನಮಗೆ ಮೇಯರ್ ಸ್ಥಾನ ಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದರು.
2 ಬಾರಿ ಮೇಯರ್ ಸ್ಥಾನ ಕೈ ತಪ್ಪಿದೆ, ಆದ್ರೆ ಈ ಬಾರಿ ಹಾಗಾಗಬಾರದು: ಎಸ್.ಟಿ.ಸೋಮಶೇಖರ್ - s t somashekar latest news
ಎರಡು ಬಾರಿ ಮೇಯರ್ ಸ್ಥಾನ ಕೈ ತಪ್ಪಿದೆ. ಆದರೆ, ಈ ಬಾರಿ ನಮಗೆ ಮೇಯರ್ ಸ್ಥಾನ ಬೇಕು. ಮೈಸೂರಿನ ಜನಪ್ರತಿನಿಧಿಗಳು ಸಭೆ ಸೇರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಮೈಸೂರಿನ ಬಿಜೆಪಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇಯರ್ ಸ್ಥಾನ ಬಿಜೆಪಿಗೆ ಸಿಗುವ ವಿಚಾರವಾಗಿ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮಾತನಾಡಿರುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ. ಆದರೆ, ಮೈಸೂರಿನ ಜನಪ್ರತಿನಿಧಿಗಳು ಸಭೆ ಸೇರಿ ಸೂಕ್ತ ನಿರ್ಧಾರ ಕೈಗೊಳ್ಳುತ್ತೇವೆ ಎಂದರು.
ಹುಣಸೂರು ತಾಲೂಕನ್ನು ಪ್ರತ್ಯೇಕ ಜಿಲ್ಲೆ ಮಾಡುವ ವಿಚಾರವಾಗಿ, ಹುಣಸೂರು ಶಾಸಕ ಹೆಚ್.ಪಿ.ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಮನವಿ ಮಾಡಿದ್ದಾರೆ. ಈ ವಿಷಯವನ್ನ ಮುಖ್ಯಮಂತ್ರಿಗಳ ಗಮನಕ್ಕೆ ತಂದು ಚರ್ಚಿಸುತ್ತೀವೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಸಿಎಂ ನೇತೃತ್ವದಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಯಲಿದೆ. ನಂತರ ಮೈಸೂರಿನಲ್ಲಿ ಸಭೆ ನಡೆಸಿ ದಸರಾ ರೂಪುರೇಷೆ ಬಗ್ಗೆ ತಿಳಿಸುತ್ತೇವೆ ಎಂದರು.