ಮೈಸೂರು: ಮೈಸೂರು ಭಾಗದಲ್ಲಿ ಜೆಡಿಎಸ್ನ ಮತ್ತೋರ್ವ ಮುಖಂಡ ಪಕ್ಷ ತೊರೆಯುತ್ತಿದ್ದಾರೆ. ಇನ್ನು ಮೂರು ದಿನಗಳಲ್ಲಿ ಅಧಿಕೃತವಾಗಿ ಜೆಡಿಎಸ್ಗೆ ರಾಜೀನಾಮೆ ನೀಡಿ, ಬಿಜೆಪಿ ಸೇರುವುದಾಗಿ ವಿಧಾನ ಪರಿಷತ್ ಸದಸ್ಯ ಸಂದೇಶ್ ನಾಗರಾಜ್ ಘೋಷಿಸಿದ್ದಾರೆ.
ಈ ಕುರಿತು ಮಾತನಾಡಿರುವ ಸಂದೇಶ್ ನಾಗರಾಜ್, ಜೆಡಿಎಸ್ಗೆ ಗುಡ್ ಬೈ ಹೇಳಿ ಮೈಸೂರಿನ ಬಿಜೆಪಿ ಕಚೇರಿಯಲ್ಲೇ ಬಿಜೆಪಿ ಸೇರ್ಪಡೆಯಾಗುತ್ತೇನೆ. ಬಿಜೆಪಿ ಸೇರುವ ದಿನ ಜೆಡಿಎಸ್ ತೊರೆಯಲು ಕಾರಣವೇನು ಎಂಬುದನ್ನು ಸುದ್ದಿಗೋಷ್ಠಿ ನಡೆಸಿ ವಿವರಿಸುತ್ತೇನೆ ಎಂದರು.
ಇದನ್ನೂ ಓದಿ:ಅನುದಾನ ಬಳಕೆ: ದೇಶದಲ್ಲಿಯೇ ದ್ವಿತೀಯ ಸ್ಥಾನ ಪಡೆದ ಸಂಸದ ಬಿ.ವೈ.ರಾಘವೇಂದ್ರ
ನನ್ನ ಅಗತ್ಯ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇದ್ದಂತಿಲ್ಲ. ಅಗತ್ಯವಿಲ್ಲದ ಕಡೆ ನಾನು ಏಕೆ ಇರಬೇಕು? ಕಳೆದ ಮೂರು ವರ್ಷಗಳಿಂದ ನಾನು ಮಾನಸಿಕವಾಗಿ ಬಿಜೆಪಿಯಲ್ಲೇ ಇದ್ದೇನೆ. ದೈಹಿಕವಾಗಿ ಅಷ್ಟೇ ಜೆಡಿಎಸ್ ನಲ್ಲಿದ್ದೆ. ವಿಧಾನ ಪರಿಷತ್ ಒಳಗೂ ನಾನು ಬಿಜೆಪಿ ಪರವೇ ಬಿಲ್ಗಳಿಗೆ ಕೈ ಎತ್ತಿದ್ದೇನೆ. ಮೂರು ವರ್ಷಗಳಿಂದ ನಾನು ಜೆಡಿಎಸ್ ನಾಯಕರ ಸಂರ್ಪಕದಲ್ಲಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಬಿಜೆಪಿ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಸಂದೇಶ್ ನಾಗರಾಜ್ ತಿಳಿಸಿದ್ದಾರೆ.